34 Km ಮೈಲೇಜ್.. 4 ಲಕ್ಷ.. 6-ಏರ್‌ಬ್ಯಾಗ್‌, ಈ ಕಾರನ್ನು ಬಡವರು ತೆಗೆದುಕೊಳ್ಳಬಹುದು.. ಆದರೂ ಖರೀದಿಸುತ್ತಿಲ್ಲ, ಏಕೆ?

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಅಗ್ಗದ ಬೆಲೆಯಲ್ಲಿಯೂ ಖರೀದಿ ದೊರೆಯುತ್ತದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಆದರೂ ತಿಂಗಳಿಂದ ತಿಂಗಳಿಗೆ 'ಆಲ್ಟೊ ಕೆ10' ಮಾರಾಟ ಸಂಖ್ಯೆ ಮಾತ್ರ ಕುಸಿತವಾಗುತ್ತಿದೆ. ಈ ಏಪ್ರಿಲ್ ತಿಂಗಳಲ್ಲೂ ಅದು ಮುಂದುವರಿದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿ ಇಂಡಿಯಾ ಬರೋಬ್ಬರಿ 5,606 ಯುನಿಟ್ 'ಆಲ್ಟೊ ಕೆ10' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 9,043 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ -38% ಇಳಿಮುಖವಾಗಿದೆ.

Maruti Suzuki Alto K10 Car April 2025 Sales Details

ಈ ವರ್ಷದ ಮೊದಲ ಮೂರು ತಿಂಗಳಲ್ಲೂ ಆಲ್ಟೊ ಕೆ10 ಕಾರುಗಳ ಮಾರಾಟದಲ್ಲಿ ಸಾಕಷ್ಟು ಏರಿಳಿತವನ್ನು ಕಾಣಲಾಗಿದೆ. ಮಾರ್ಚ್‌ನಲ್ಲಿ 9,867 ಯುನಿಟ್, ಫೆಬ್ರವರಿಯಲ್ಲಿ 8,541 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 11,352 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಹಾಗೆಯೇ 2024ರ ಡಿಸೆಂಬರ್‌ನಲ್ಲಿ 7,410 ಯುನಿಟ್ ಮತ್ತು 7,467 ಯುನಿಟ್‌ಗಳನ್ನು ಮಾರಾಟಲಾಗಿತ್ತು.

ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ಗಳ ಮಾರಾಟ ಸಂಖ್ಯೆ ಇಳಿಕೆಯಾಗುತ್ತಿರುವ ಬಗ್ಗೆ ಕಂಪನಿಯೂ ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ವಾಹನ ತಯಾರಕ ಕಂಪನಿಗಳು, ಅತ್ಯಾಧುನಿಕ ವಿನ್ಯಾಸ & ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಲವು ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿವೆ. ಖರೀದಿದಾರರು ಅವುಗಳತ್ತ ಮುಖ ಮಾಡಿರುವುದರಿಂದ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki Alto K10 Car April 2025 Sales Details

ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು..

ಈ ಹ್ಯಾಚ್‌ಬ್ಯಾಕ್‌ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

ನೂತನ ಆಲ್ಟೊ ಕೆ10 ಕಾರು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Alto K10 Car April 2025 Sales Details

ಹೊಸ ಮಾರುತಿ ಆಲ್ಟೊ ಕೆ10 ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, 4 ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

Take a Poll

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, May 18, 2025, 12:22 [IST]
English summary
Maruti suzuki alto 10 car april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+