ಬಡವರ ಬಂಧು.. 34 ಕಿ.ಮೀ ಮೈಲೇಜ್, 4 ಲಕ್ಷ.. 5-ಸೀಟರ್, ಈ ಮಾರುತಿ ಕಾರನ್ನು ಹೆಚ್ಚು ಜನರು ಕೊಂಡಿಲ್ಲ.. ಯಾಕೆ?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ಜನಮೆಚ್ಚಿದ ಹ್ಯಾಚ್‌ಬ್ಯಾಕ್ ಆಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದ್ದು, ಮಧ್ಯಮ ವರ್ಗದ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಆದರೂ ಈ ಆಗಸ್ಟ್ ತಿಂಗಳು 'ಆಲ್ಟೊ ಕೆ10' ಕಾರಿನ ಮಾರಾಟ ಸಂಖ್ಯೆ ಇಳಿಮುಖವಾಗಿದೆ. ಒಟ್ಟು 5,520 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 8,546 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -35.41% ಕುಸಿತವಾಗಿದೆ.
ನೂತನ ಮಾರುತಿ ಆಲ್ಟೊ ಕೆ10 ಮಾರಾಟ ಸಂಖ್ಯೆಯು ಇಳಿಕೆಯಾಗಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಆಗಸ್ಟ್‌ನಲ್ಲಿಯೇ ಕೇಂದ್ರ ಸರ್ಕಾರವು ಕಾರುಗಳು ಖರೀದಿ ಮೇಲೆ ವಿಧಿಸುವ ಜಿಎಸ್‌ಟಿ ಪ್ರಮಾಣವನ್ನು ಕಡಿಮೆ ಮಾಡಲಿದೆ ಎಂಬ ಸುಳಿವು ಗ್ರಾಹಕರಿಗೆ ದೊರೆತಿತ್ತು. ಜೊತೆಗೆ ಬಹುತೇಕರು ಎಸ್‌ಯುವಿಗಳನ್ನು ತೆಗೆದುಕೊಳ್ಳುವತ್ತ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ, ಆಲ್ಟೊ ಕೆ10 ಮಾರಾಟವು ಕಡಿಮೆಯಾಗಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು:
ಪ್ರಸ್ತುತ ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.4.23 ಲಕ್ಷ ಹಾಗೂ ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈಗಾಗಲೇ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ನೂತನ ದರಗಳು ಸೆಪ್ಟೆಂಬರ್ 22 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಆ ಬಳಿಕ, ಆಲ್ಟೊ ಕೆ10 ಬೆಲೆ ಮತ್ತಷ್ಟು ಇಳಿಕೆಯಾಗಲಿದೆ.
ಇದು ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ದೊಡ್ಡದಾದ ಟೈಲ್ ಲ್ಯಾಂಪ್‌ಗಳು ಮತ್ತು 13 ಇಂಚಿನ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಸಿಲ್ಕಿ ಸಿಲ್ವರ್, ಗ್ರಾನೈಟ್ ಗ್ರೇ, ಸ್ಪೀಡಿ ಬ್ಲೂ, ಅರ್ಥ್ ಗೋಲ್ಡ್, ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಆಲ್ಟೊ ಕೆ10 ಕೊಂಚ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3530 ಎಂಎಂ ಉದ್ದ, 1490 ಅಗಲ ಹಾಗೂ 1520 ಎತ್ತರವಿದೆ. 167 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 741 ಕೆಜಿ ತೂಕವು ಸಹ ಇದೆ.
ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಯುತವಾಗಿರುವ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಇದರಲ್ಲಿ 5 ಆಸನಗಳಿವೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಪವರ್ ಸ್ಟೀರಿಂಗ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಆಲ್ಟೊ ಕೆ10 ಸಣ್ಣ ಗಾತ್ರದ ಕಾರಾಗಿದ್ದರೂ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.


Click it and Unblock the Notifications








