34 ಕಿ.ಮೀ ಮೈಲೇಜ್.. 4 ಲಕ್ಷ, ಇದು ಪರ್ಫೆಕ್ಟ್ ಬಡವರ ಕಾರು.. ಈಗಲೂ 'ಸೇಲ್ಸ್' ಕಿಂಗ್!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಗ್ರಾಹಕರ ನೆಚ್ಚಿನ ಕಾರಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈಚೆಗೆ 'ಮಾರುತಿ ಸುಜುಕಿ' ಕಂಪನಿಯು ಎಲ್ಲ ಕಾರುಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಎಂಟ್ರಿ ಲೆವೆಲ್ ಮಾಡೆಲ್ 'ಆಲ್ಟೊ ಕೆ10' ಗರಿಷ್ಠ ಸಂಖ್ಯೆಯಲ್ಲಿ ಕೂಡ ಮಾರಾಟಗೊಂಡಿದೆ. ಬನ್ನಿ.. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಬರೋಬ್ಬರಿ 9,867 ಯುನಿಟ್ 'ಆಲ್ಟೊ ಕೆ10' ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 9,332 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 6% ಬೆಳವಣಿಗೆಯಾಗಿದೆ. ಈ ವರ್ಷದ ಮೊದಲೆರೆಡು ತಿಂಗಳಾದ ಫೆಬ್ರವರಿಯಲ್ಲಿ 8,541 ಯುನಿಟ್ ಮತ್ತು ಜನವರಿಯಲ್ಲಿ 11,352 ಯುನಿಟ್‌ ಆಲ್ಟೊ ಕೆ10 ಕಾರುಗಳನ್ನು ಮಾರಾಟ ಮಾಡಲಾಗಿದೆ.

Maruti Suzuki Alto K10 Car March 2025 Sales Details

ವಿಶೇಷವಾಗಿ 2024ರ ಕೊನೆಯ 3 ತಿಂಗಳು ಸಹ 'ಮಾರುತಿ ಸುಜುಕಿ ಆಲ್ಟೊ ಕೆ10' ಹ್ಯಾಚ್‌ಬ್ಯಾಕ್ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿದೆ. ಡಿಸೆಂಬರ್‌ನಲ್ಲಿ 7,410 ಯುನಿಟ್, ನವೆಂಬರ್‌ನಲ್ಲಿ 7,467 ಯುನಿಟ್ ಹಾಗೂ ಅಕ್ಟೋಬರ್‌ ತಿಂಗಳಲ್ಲಿ 8,548 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿಸಂಖ್ಯೆಯನ್ನು ಗಮನಿಸಿದಾಗ ಪ್ರತಿ ತಿಂಗಳು ಸರಾಸರಿ 8,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ದೇಶೀಯವಾಗಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು, ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್- ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿಸಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Maruti Suzuki Alto K10 Car March 2025 Sales Details

ಈ ಕಾರು 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಇಂಧನ ದಕ್ಷತೆಯನ್ನು ಪಡೆದಿದ್ದು, ಪೆಟ್ರೋಲ್ ಮಾಡೆಲ್‌ಗಳು 24.39 ರಿಂದ 24.90 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾಡೆಲ್‌ಗಳು 33.85 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.

ನೂತನ ಹ್ಯಾಚ್‌ಬ್ಯಾಕ್ ಹತ್ತಾರು ನವೀನತೆಗಳಿಗೂ ಸಾಕ್ಷಿಯಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ & 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮತ್ತು ಸಾಲಿಡ್ ವೈಟ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Alto K10 Car March 2025 Sales Details

ಹೊಸ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ ರೇರ್ ಪ್ಯಾಸೆಂಜರ್‌ಗಳಿಗಾಗಿ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ. ಈ ಹ್ಯಾಚ್‌ಬ್ಯಾಕ್‌ಗೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 14, 2025, 8:32 [IST]
English summary
Maruti suzuki alto k10 car march 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+