Maruti Suzuki: ಮಾರುತಿ ಸುಜುಕಿಯ ಈ ಜನಪ್ರಿಯ ಕಾರುಗಳ ಬೆಲೆ ಪರಿಷ್ಕರಣೆ.. ಯಾವುದಕ್ಕೆ ಎಷ್ಟು?

ಮಾರುತಿ ಸುಜುಕಿ (Maruti Suzuki), ದೇಶೀಯ ಮಾರುಕಟ್ಟೆಯಲ್ಲಿ ಅರೆನಾ ಮತ್ತು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಪ್ರತಿಯೊಂದು ಕಾರುಗಳ ಬೆಲೆಯನ್ನು ಹೆಚ್ಚಿಸಿದೆ. ರೂ.1,500 ರಿಂದ ರೂ.32,500 ವರೆಗೆ ದರ ಪರಿಷ್ಕರಣೆಗೊಂಡಿದ್ದು, ನೂತನ ಬೆಲೆಗಳು ಫೆಬ್ರವರಿ 1 ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿವೆ. ನಾವಿಲ್ಲಿ ದರ ಏರಿಕೆ ಪಡೆದುಕೊಂಡ ಆಲ್ಟೊ ಕೆ10 (Alto K10), ಸೆಲೆರಿಯೊ (Celerio) ಮತ್ತು ಸ್ವಿಫ್ಟ್ (Swift) ಕಾರುಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕುರಿತಂತೆ ಮಾತನಾಡೋಣ. ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.8,500 ರಿಂದ ರೂ.19,500 ದರ ಏರಿಕೆಯನ್ನು ಪಡೆದುಕೊಂಡಿದೆ. ಬೆಲೆ ಹೆಚ್ಚಳದ ನಂತರ, ಈ ಕಾರು, ರೂ.4.09 ಲಕ್ಷದಿಂದ ರೂ.5.99 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ.

Maruti Suzuki Alto k10 Celerio And Swift Price Revised Full Details

ನೂತನ ಆಲ್ಟೊ ಕೆ10 ಕಾರು 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರಲ್ಲಿ 4/ 5 ಮಂದಿ ಓಡಾಟ ನಡೆಸಬಹುದು.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಇದು ರೂ.16,000 ರಿಂದ ರೂ.32,500 ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ ಹೊಸ ಸೆಲೆರಿಯೊ ಕಾರು, ಕನಿಷ್ಠ ರೂ.5.64 ಲಕ್ಷ ಮತ್ತು ಗರಿಷ್ಠ ರೂ.7.37 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ.

Maruti Suzuki Alto k10 Celerio And Swift Price Revised Full Details

ಈ ಕಾರು 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಕಡೆಯದಾಗಿ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡುವುದಾದರೆ, ಈ ಕಾರಿನ ದರ ಕನಿಷ್ಠ ಮಟ್ಟದಲ್ಲಿ ಹೆಚ್ಚಳವಾಗಿದೆ. ಇದರ ಎಲ್ಲ ರೂಪಾಂತರಗಳ ಬೆಲೆ ರೂ.5,000 ವರೆಗೆ ಏರಿಕೆಯಾಗಿದೆ. ಈ ಮೂಲಕ ಹೊಸ ಸ್ವಿಫ್ಟ್ ರೂ.7.79 ಲಕ್ಷದಿಂದ ರೂ.9.65 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ.

Maruti Suzuki Alto k10 Celerio And Swift Price Revised Full Details

ನೂತನ ಸ್ವಿಫ್ಟ್ ಕಾರು 1.2-ಲೀ. 3-ಸಿಲಿಂಡರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 5 ಆಸನಗಳನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6-ಸ್ಪೀಕರ್ ಅರ್ಕಾಮಿಸ್-ಟ್ಯೂನ್ಡ್ ಆಡಿಯೊ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್ ಮತ್ತು ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಒಳಗೊಂಡನಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 6, 2025, 21:24 [IST]
English summary
Maruti suzuki alto k10 celerio and swift price revised full details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+