33.85 ಕಿ.ಮೀ ಮೈಲೇಜ್.. 4 ಲಕ್ಷ, ಮಾರುತಿ ಸುಜುಕಿ ಆಲ್ಟೊ ಕಾರಿನಲ್ಲಿ 6 ಏರ್‌ಬ್ಯಾಗ್‌.. ಪ್ರಮುಖಾಂಶಗಳಿವು!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈ ಕಾರನ್ನು ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಆಯ್ಕೆಯಲ್ಲಿ ಮಾರಾಟಗೊಳಿಸಲಾಗಿತ್ತು. ಸದ್ಯ, 6 ಏರ್‌ಬ್ಯಾಗ್‌ಗಳೊಂದಿಗೆ ನವೀಕರಿಸಿ ಹೊರತರಲಾಗಿದೆ. ಬನ್ನಿ.. ಈ ಹ್ಯಾಚ್‌ಬ್ಯಾಕ್‌ನ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ (Price): ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಮಧ್ಯಮ ವರ್ಗದ ಜನರಿಗೆ ಹೇಳಿ ಮಾಡಿಸಿದ ಕಾರಾಗಿದ್ದು, ಬಜೆಟ್ ಬೆಲೆಯಲ್ಲಿ ಲಭ್ಯವಾಗುತ್ತದೆ. 6 ಏರ್‌ಬ್ಯಾಗ್‌ಗಳನ್ನು ಹೊಂದಿರುವುದರಿಂದ ರೂ.16,000 ವರೆಗೆ ಬೆಲೆ ಏರಿಕೆಯಾಗಿದ್ದು, ರೂ.4.23 ಲಕ್ಷದಿಂದ ರೂ.6.21 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ.

Maruti Suzuki Alto K10 Comes With 6 Airbags Top Things You Should Must Know

ರೂಪಾಂತರ & ಬಣ್ಣಗಳು (Variants & Colors): ಈ ಹ್ಯಾಚ್‌ಬ್ಯಾಕ್ ಸ್ಟ್ಯಾಂಡರ್ಡ್, ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್ ಹಾಗೂ ಸಾಲಿಡ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಕಾರ್ಯಕ್ಷಮತೆ (Performance): ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದ್ದರೂ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಪಡೆದುಕೊಂಡಿಲ್ಲ. ಇದು 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಡುಯಲ್ಜೆಟ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

Maruti Suzuki Alto K10 Comes With 6 Airbags Top Things You Should Must Know

ಆಸನ ಆಯ್ಕೆ & ವೈಶಿಷ್ಟ್ಯಗಳು (Seat Options & Features): ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಮತ್ತು 4 ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ 6 ಏರ್‌ಬ್ಯಾಗ್‌ಗಳು ಮಾತ್ರವಲ್ಲದೆ, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, ರೇರ್ ಪ್ಯಾಸೆಂಜರ್ ಗಳಿಗಾಗಿ 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು ರೇರ್ ಡೋರ್ ಚೈಲ್ಡ್ ಲಾಕ್ ಅನ್ನು ಒಳಗೊಂಡಿದೆ.

Maruti Suzuki Alto K10 Comes With 6 Airbags Top Things You Should Must Know

ಇನ್ನು, ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು 6 ಏರ್‌ಬ್ಯಾಗ್‌ನೊಂದಿಗೆ ಮಾರಾಟಕ್ಕೆ ಬಂದಿರುವುದು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಕಡಿಮೆ ಬೆಲೆಯಲ್ಲಿಯೇ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬಂದಿದ್ದು, ಹೆಚ್ಚಿನ ಸಂಖ್ಯೆಯ ಖರೀದಿದಾರರ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 3, 2025, 8:22 [IST]
English summary
Maruti suzuki alto k10 comes with 6 airbags top things you should must know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+