34 Km ಮೈಲೇಜ್.. 6 ಏರ್‌ಬ್ಯಾಗ್‌ನ ಅಗ್ಗದ ಮಾರುತಿ ಆಲ್ಟೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು.. EMI ಏನು?

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದನ್ನು 6 ಏರ್‌ಬ್ಯಾಗ್‌ನೊಂದಿಗೆ ನವೀಕರಿಸಲಾಗಿದ್ದು, ಕನಿಷ್ಠ ರೂ.4.23 ಲಕ್ಷ ಹಾಗೂ ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಕೂಡ ಹೊಚ್ಚ ಹೊಸ ಆಲ್ಟೊ ಕೆ10 ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ನೂತನ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಹಲವು ವಿಧದ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ (ಪೆಟ್ರೋಲ್) ಮಾಡೆಲ್, ರೂ.5 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.4 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಕನಿಷ್ಠ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.8000 ವರೆಗೆ ಇಎಂಐ ಕಟ್ಟಬೇಕು.

Maruti Suzuki Alto K10 Get 6 Airbags New On-Road Price And Emi Details

ಈ ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಪೆಟ್ರೋಲ್) ಮಾಡೆಲ್, ರೂ.5.90 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4.90 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.10,000 ವರೆಗೆ ಇಎಂಐ ಪಾವತಿಸಬೇಕು.

ಆಲ್ಟೊ ಕೆ10 ಕಾರಿನ ವಿಎಕ್ಸ್ಐ (ಪೆಟ್ರೋಲ್) ಮಾಡೆಲ್, ರೂ.6.30 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.5 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.11,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Alto K10 Get 6 Airbags New On-Road Price And Emi Details

ನೂತನ ಮಾರುತಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಸಿಎನ್‌ಜಿ) ಮಾಡೆಲ್, ರೂ.7 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ಕೂಡ ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.6 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.12,000 ವರೆಗೆ ಇಎಂಐ ಪಾವತಿಸಬೇಕು.

ಈ ಕಾರು, 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದು ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಸಾಲಿಡ್ ವೈಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Alto K10 Get 6 Airbags New On-Road Price And Emi Details

ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಹಾಗೂ 4 ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಅಗ್ಗದ ಬೆಲೆಯನ್ನು ಹೊಂದಿದ್ದರೂ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10 ಕಾರಿನ ಕೆಲವು ಮಾಡೆಲ್‌ಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Friday, March 28, 2025, 20:00 [IST]
English summary
Maruti suzuki alto k10 get 6 airbags new on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+