ಮೂಗು ಮುರಿಯುವವರಿಗೆ ತಕ್ಕ ಉತ್ತರ: ಸೇಫ್ಟಿ ಕಾರಾಗಿ ಮಾರುತಿ ಆಲ್ಟೊ, 6 ಏರ್‌ಬ್ಯಾಗ್‌ನೊಂದಿಗೆ ಬಂತು.. 4 ಲಕ್ಷ ಬೆಲೆ!
ಮಾರುತಿ ಸುಜುಕಿ ಇಂಡಿಯಾ (Maruti Suzuki India), ದೇಶೀಯ ಕಾರು ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಕಂಪನಿ ಮಾರಾಟಗೊಳಿಸುವ ಕಾರುಗಳಲ್ಲಿ 'ಆಲ್ಟೊ ಕೆ10' ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಮಾರುತಿ ಸುಜುಕಿಯ ಇದೇ 'ಆಲ್ಟೊ ಕೆ10'ನ್ನು ನವೀಕರಿಸಿ ಮಾರಾಟಕ್ಕೂ ತಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್‌ನ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ. ಇದರ ಎಲ್ಲ ರೂಪಾಂತರಗಳು (ವೇರಿಯೆಂಟ್) 6 ಏರ್‌ಬ್ಯಾಗ್‌ಗಳನ್ನು ಹೊಂದಿವೆ. ಈ ಹಿನ್ನೆಲೆ, ರೂ.16,000 ವರೆಗೂ ಬೆಲೆ ಏರಿಕೆ ಮಾಡಲಾಗಿದ್ದು, ನೂತನ ಆಲ್ಟೊ ಕೆ10 ಕನಿಷ್ಠ ರೂ.4.23 ಲಕ್ಷ ಮತ್ತು ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಈ ಕಾರು 6 ಏರ್‌ಬ್ಯಾಗ್‌ಗಳು ಮಾತ್ರವಲ್ಲದೆ, ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, ರೇರ್ ಪ್ಯಾಸೆಂಜರ್ ಗಳಿಗಾಗಿ 3-ಪಾಯಿಂಟ್ ಸೀಟ್ ಬೆಲ್ಟ್‌ಗಳು, ರೇರ್ ಡೋರ್ ಚೈಲ್ಡ್ ಲಾಕ್, ಎಂಜಿನ್ ಇಮೊಬಿಲೈಜರ್, ಹೈ-ಸ್ಪೀಡ್ ಅಲರ್ಟ್ ಸಿಸ್ಟಮ್, ಹೆಡ್‌ಲ್ಯಾಂಪ್ ಲೆವೆಲಿಂಗ್ ಮತ್ತು ಹೈ-ಮೌಂಟೆಡ್ ಸ್ಟಾಪ್ ಲ್ಯಾಂಪ್ ಅನ್ನು ಒಳಗೊಂಡಿದೆ.
ನೂತನ ಮಾರುತಿ ಆಲ್ಟೊ ಕೆ10 ಮೇಲ್ದರ್ಜೆರಿಸಿದ ಮ್ಯೂಸಿಕ್ ಸಿಸ್ಟಮ್ ಹೊಂದಿದೆ. ಇದು 4 ಸ್ಪೀಕರ್ ಆಯ್ಕೆಯನ್ನು ಪಡೆದಿದೆ. ಜೊತೆಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಹಾಗೂ ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್, ಸಾಲಿಡ್ ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 214 ಲೀ.ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 67 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮತ್ತೊಂದು ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. 56 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದರೊಟ್ಟಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಹಾಗೂ ಎಂಜಿನ್ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿಯನ್ನು ಹೊಂದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications