34 ಕಿ.ಮೀ ಮೈಲೇಜ್.. 6 ಏರ್‌ಬ್ಯಾಗ್‌ಗಳು, 4 ಲಕ್ಷ ಬೆಲೆ.. ಆದ್ರೂ ಈ ಮಾರುತಿ ಕಾರನ್ನು ಗ್ರಾಹಕರು ಕೊಳ್ಳುತ್ತಿಲ್ಲ, ಯಾಕೆ?

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪುಟ್ಟ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಮತ್ತು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಂದಿಗೆ ಶ್ರೀಸಾಮಾನ್ಯರ ಕಾರೆಂದು ಹೆಸರುವಾಸಿಯಾಗಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ. ಅದು ಜುಲೈನಲ್ಲೂ ಮುಂದುವರಿದಿದೆ. ಬರೋಬ್ಬರಿ 5,910 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 7,353 ಯುನಿಟ್‌ಗಳನ್ನು ಮಾರಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -20% ಇಳಿಕೆಯಾಗಿದೆ.

ಈ ವರ್ಷದ ಫೆಬ್ರವರಿಯಿಂದ ಜೂನ್ ಅವಧಿಯಲ್ಲಿಯೂ 'ಮಾರುತಿ ಆಲ್ಟೊ ಕೆ10' ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಒಟ್ಟು 34,029 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 6,805 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Maruti Suzuki Alto K10 July 2025 Sales Report

ಮಾರುತಿ ಸುಜುಕಿ ಆಲ್ಟೊ ಕೆ10 ದಿನದಿಂದ ದಿನಕ್ಕೆ ಕುಸಿತವಾಗಲು ನಾನಾ ಕಾರಣಗಳಿವೆ. ಇದೇ ಕಾರಿನ ಬೆಲೆಗೆ ಕೊಂಚ ಹೆಚ್ಚಿನ ಹಣ ಪಾವತಿಸಿದರೆ, ಎಸ್‌ಯುವಿಗಳನ್ನೇ ತೆಗೆದುಕೊಳ್ಳಬಹುದು. ಗ್ರಾಹಕರು ಕೂಡ ಅವುಗಳನ್ನು ಕೊಂಡುಕೊಳ್ಳುವತ್ತ ಆಸಕ್ತಿ ತೋರಿಸುತ್ತಿದ್ದಾರೆ. ಜೊತೆಗಿದು ಸಣ್ಣ ಗಾತ್ರದ ಕಾರಾಗಿದ್ದು, ಹೀಗಾಗಿಯೂ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು:

ಇದು ಕಡಿಮೆ ಬೆಲೆಯಲ್ಲಿಯೂ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರು ಖರೀದಿಸಲು ಸಾಧ್ಯವಾಗಲಿದೆ. ಅದಕ್ಕೆ ತಕ್ಕಂತೆ ಕನಿಷ್ಠ ರೂ.4.23 ಲಕ್ಷ ಹಾಗೂ ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ಲಭ್ಯವಿದೆ.

Maruti Suzuki Alto K10 July 2025 Sales Report

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಟಿಯರ್‌ಡ್ರಾಪ್ ಶೇಪ್ಡ್ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು ಹಾಗೂ 13-ಇಂಚಿರುವ ವೀಲ್‌ಗಳನ್ನು ಒಳಗೊಂಡಿದೆ. ಪ್ರೀಮಿಯಂ ಅರ್ಥ್ ಗೋಲ್ಡ್, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಗೂ ದೊರೆಯುತ್ತದೆ.

ನೂತನ ಆಲ್ಟೊ ಆಸನ ಆಯ್ಜೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 3530 ಎಂಎಂ ಉದ್ದ, 1490 ಅಗಲ ಹಾಗೂ 1520 ಎತ್ತರವು ಇದೆ. 167 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2380 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Maruti Suzuki Alto K10 July 2025 Sales Report

ಇದು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನಾಗಿಸಿಕೊಂಡಿದೆ. 741 ಕೆಜಿ ತೂಕವು ಇದೆ.

ಹೊಸ ಆಲ್ಟೊ 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.23 ಸೆಕೆಂಡುಗಳಲ್ಲಿ 0-60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದ್ದು, ನೋಡುಗರ ಸೆಳೆಯುವಂತಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಪವರ್ ಸ್ಟೀರಿಂಗ್, ಕೀಲೆಸ್ ಎಂಟ್ರಿ, ಅಡ್ಜಸ್ಟೇಬಲ್ ಹೆಡ್‌ರೆಸ್ಟ್‌ಗಳು, 4 ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಆಲ್ಟೊ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊ ಕಾರುಗಳು ಪ್ರಬಲ ಎದುರಾಳಿಯಾಗಿವೆ.

More from DriveSpark

Article Published On: Tuesday, August 19, 2025, 8:30 [IST]
English summary
Maruti suzuki alto k10 july 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+