ಬಡವರ ಕಾರಿದು.. 34 Km ಮೈಲೇಜ್.. 4 ಲಕ್ಷ, 6 ಏರ್‌ಬ್ಯಾಗ್‌, ಆದ್ರೂ ಮಾರಾಟ ಪ್ರಮಾಣ 35% ಇಳಿಕೆ!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದ್ದು, ಮಧ್ಯಮ ವರ್ಗದ ಗ್ರಾಹಕರಿಗೆ ಹೇಳಿ ಮಾಡಿಸಿದ ರೀತಿಯಲಿದೆ. ಆದರೂ ದಿನದಿಂದ ದಿನಕ್ಕೆ ಈ ಕಾರಿನ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ. ಅದು ಈ ಜೂನ್ ತಿಂಗಳಲ್ಲೂ ಮುಂದುವರಿದಿದ್ದು, ಒಟ್ಟು 5045 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 35.11% ಕುಸಿತವಾಗಿದೆ. 2024ರ ಇದೇ ಅವಧಿಯಲ್ಲಿ 7,775 ಯುನಿಟ್‌ಗಳನ್ನು ಮಾರಲಾಗಿತ್ತು.

ಈ ವರ್ಷದ ಮೊದಲ 5 ತಿಂಗಳಲ್ಲೂ ಮಾರುತಿ ಆಲ್ಟೊ ಕಾರಿನ ಮಾರಾಟವು ಅಷ್ಟೊಂದು ಚೆನ್ನಾಗಿರಲ್ಲ. ಅಲ್ಲಿಯೂ ಹಾವು - ಏಣಿ ಆಟ ಮುಂದಿವರಿದಿದೆ. ಬರೋಬ್ಬರಿ 40,336 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ, ತಿಂಗಳಿಗೆ ಸರಾಸರಿ 8,000 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Maruti Suzuki Alto K10 June 2025 Sales Report

ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು:

ಇದೊಂದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿ ದೊರೆಯಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಪ್ರೀಮಿಯಂ ಅರ್ಥ್ ಗೋಲ್ಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ 3530 ಎಂಎಂ ಉದ್ದ, 1490 ಅಗಲ ಹಾಗೂ 1520 ಎತ್ತರವು ಇದೆ. 167 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2380 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Maruti Suzuki Alto K10 June 2025 Sales Report

ಇದರಲ್ಲಿ 4/ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ದೂರದ ಊರುಗಳಿಗೆ ಸುಲಭವಾಗಿ ತೆರಳಲು 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ನೂತನ ಆಲ್ಟೊ ಎರಡು ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 65.71 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 24.90 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Alto K10 June 2025 Sales Report

ಮತ್ತೊಂದು 1-ಲೀಟರ್ ಸಿಎನ್‌ಜಿ ಎಂಜಿನ್‌, 56.70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 33.85 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಕನೆಕ್ಟಿವಿಟಿ, ಕೀಲೆಸ್ ಎಂಟ್ರಿ, 4 ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು, ರೇರ್ ಡೋರ್ ಚೈಲ್ಡ್ ಲಾಕ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

Article Published On: Monday, July 14, 2025, 8:27 [IST]
English summary
Maruti suzuki alto k10 june 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+