ಬಡವರಿಗೆ ಬೆಸ್ಟ್ ಕಾರು.. 34 Km ಮೈಲೇಜ್.. 4 ಲಕ್ಷ, 6 ಏರ್‌ಬ್ಯಾಗ್, ಆದರೂ ಖರೀದಿಸಲು ಹಿಂದೇಟು.. ಕಾರಣವೇನು?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಕೆಲವೇ ತಿಂಗಳ ಹಿಂದೆ, ಈ ಕಾರನ್ನು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುವ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನಿಂದ 6 ಏರ್‌ಬ್ಯಾಗ್‌ಗಳಿಗೆ ಮೇಲ್ದರ್ಜೆರಿಸಲಾಯಿತು. ಅದರ ಹೊರತಾಗಿಯೂ 'ಆಲ್ಟೊ ಕೆ10' ಮಾರಾಟ ಸಂಖ್ಯೆಯು ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಈ 'ಮೇ' ತಿಂಗಳಲ್ಲೂ ಅದು ಮುಂದುವರಿದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮೇ-2025) ಮಾರುತಿ ಸುಜುಕಿಯು 'ಆಲ್ಟೊ ಕೆ10' ಪುಟ್ಟ ಕಾರಾಗಿದ್ದರೂ ಒಟ್ಟು 4970 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ 'ಮೇ'ನಲ್ಲಿ 7675 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯಲ್ಲಿ ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -35.24% ಇಳಿಕೆಯಾಗಿದೆ.

ಇದೇ ವರ್ಷದ ಮೊದಲ 4 ತಿಂಗಳಲ್ಲೂ 'ಮಾರುತಿ ಆಲ್ಟೊ ಕೆ10' ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದ್ದು, ಅಷ್ಟೇನು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿಲ್ಲ. ಈ ಕಾರಿನ ಮಾರಾಟ ಸಂಖ್ಯೆ ಇಳಿಮುಖವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸ್ವಲ್ಪ ಹೆಚ್ಚಿನ ಹಣ ಪಾವತಿಸಿದರೂ ಇದಕ್ಕಿಂತ ಉತ್ತಮವಾಗಿರುವ ಎಸ್‌ಯುವಿಗಳನ್ನು ಖರೀದಿ ಮಾಡಬಹುದು. ಜೊತೆಗೆ ವೈಶಿಷ್ಟ್ಯಗಳು ಕೂಡ ಸಾಕಷ್ಟು ಅತ್ಯಾಧುನಿಕವಾಗಿಲ್ಲ. ಹೀಗಾಗಿ 'ಆಲ್ಟೊ ಕೆ10' ಮಾರಾಟ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು:
ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಅತಿ ಕಡಿಮೆ ಬೆಲೆಗೆ ಸಿಗುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಈ ಕಾರು ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ & ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಜೊತೆಗೆ ಬೆಲೆಗೆ ತಕ್ಕಂತೆ ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್ ಹಾಗೂ ಸಾಲಿಡ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಆಲ್ಟೊ ಹ್ಯಾಚ್‌ಬ್ಯಾಕ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದು 1-ಲೀ. ಸಾಮರ್ಥ್ಯದ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದ್ದು, 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 214 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರಿನ ಬೆಲೆ ಕಡಿಮೆಯಿದ್ದರೂ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು, ರೇರ್ ಡೋರ್ ಚೈಲ್ಡ್ ಲಾಕ್ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.


Click it and Unblock the Notifications