ಬಡವರ ಕಾರಿದು: 34 ಕಿ.ಮೀ ಮೈಲೇಜ್.. 3.70 ಲಕ್ಷ, ಪುಟ್ಟ ಮಾರುತಿ ಆಲ್ಟೊಗೆ ಫುಲ್ ಡಿಮ್ಯಾಂಡ್.. ಸೇಲ್ಸ್ ಜೋರು!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಸಣ್ಣ ಹ್ಯಾಚ್‌ಬ್ಯಾಕ್ ಆಗಿದ್ದು, ಮಧ್ಯಮ ವರ್ಗದ ಜನರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಅದು ಈ ನವೆಂಬರ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 10,600 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 7,467 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 41.96% ಬೆಳವಣಿಗೆಯಾಗಿದೆ.

ಇದೇ ನವೆಂಬರ್‌ನಲ್ಲಿ 'ಮಾರುತಿ ಆಲ್ಟೊ ಕೆ10' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ 'ಜಿಎಸ್‌ಟಿ' ಪರಿಷ್ಕರಣೆಗೊಂಡಿದೆ. ಈ ಕಾರಿನ ದರವು ಇಳಿಕೆಯಾಗಿದೆ. ಜೊತೆಗಿದು ಬೆಲೆಗೆ ತಕ್ಕಂತೆ ಅತ್ಯಾಕರ್ಷಕವಾಗಿದೆ. ಹೀಗಾಗಿ, ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

Maruti Suzuki Alto K10 November 2025 Sales Report

ಈ ವರ್ಷದ ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೂ 'ಮಾರುತಿ ಸುಜುಕಿ ಆಲ್ಟೊ ಕೆ10' ಕಾರಿನ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 28,119 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಅಂದರೆ ಪ್ರತಿ ತಿಂಗಳು 5,623 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ನೂತನ 'ಆಲ್ಟೊ ಕೆ10' ರೂಪಾಂತರಗಳಿಗೆ ಅನುಗುಣವಾಗಿ ಕನಿಷ್ಠ ರೂ.3.70 ಲಕ್ಷ ಗರಿಷ್ಠ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

ಇದು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. 3,530 ಎಂಎಂ ಉದ್ದ, 1,490 ಎಂಎಂ ಅಗಲ ಹಾಗೂ 1,520 ಮಿ.ಮೀ ಎತ್ತರವಿದೆ. 167 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Alto K10 November 2025 Sales Report

ಹೊಸ 'ಆಲ್ಟೊ ಕೆ10' ಕಾರು ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್ ಮತ್ತು ಪ್ರೀಮಿಯಂ ಅರ್ಥ್ ಗೋಲ್ಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನ ಆಯ್ಕೆ ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಬೆಲೆಗೆ ತಕ್ಕಂತೆ ಉತ್ತಮವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 34 ಕಿ.ಮೀವರೆಗೆ ನೀಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Alto K10 November 2025 Sales Report

ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಧುನಿಕವಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, ಕೀಲೆಸ್ ಎಂಟ್ರಿ, 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ 'ಆಲ್ಟೊ ಕೆ10' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಬಲ್ಲದು. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೀಟ್ ಬೆಲ್ಟ್ ರಿಮೆಂಡರ್, ಚೈಲ್ಡ್ ಪ್ರೂಫ್ ರೇರ್ ಡೋರ್ ಲಾಕ್‌ಗಳು, ಹೈ-ಸ್ಪೀಡ್ ಅಲರ್ಟ್ ಸಿಸ್ಟಮ್ ಮತ್ತು 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಯಾಗಿವೆ. ಟಾಟಾ ಟಿಯಾಗೊ (Tata Tiago), ಹ್ಯುಂಡೈ ಐ20 (Hyundai i20), ರೆನಾಲ್ಟ್ ಕ್ವಿಡ್ (Renault KWID) ಹಾಗೂ ಸಿಟ್ರನ್ ಸಿ3 (Citroen C3) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Saturday, December 13, 2025, 22:00 [IST]
English summary
Maruti suzuki alto k10 november 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+