34 Km ಮೈಲೇಜ್.. ಬರೀ 3.70 ಲಕ್ಷ.. ಆದರೂ ಈ ಮಾರುತಿ ಕಾರನ್ನು ತೆಗೆದುಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಯಾಕೆ?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ದಶಕಗಳಿಂದಲೂ ಶ್ರೀಸಾಮಾನ್ಯರ ನೆಚ್ಚಿನ ಕಾರಾಗಿಯೂ ಹೊರಹೊಮ್ಮಿದೆ. ಆದರೂ 'ಆಲ್ಟೊ ಕೆ10'ನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಅದು ಈ ಅಕ್ಟೋಬರ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 6,210 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 8,548 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -27.35% ಇಳಿಮುಖವಾಗಿದೆ.
ಇದೇ ಅಕ್ಟೋಬರ್‌ನಲ್ಲಿ 'ಮಾರುತಿ ಆಲ್ಟೊ ಕೆ10' ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಬಹುತೇಕ ಗ್ರಾಹಕರು 'ಎಸ್‌ಯುವಿ'ಗಳನ್ನು ಕೊಂಡುಕೊಳ್ಳಲು ಆಸಕ್ತಿ ತೋರಿಸಿದ್ದಾರೆ. ಜೊತೆಗೆ ಈ ಕಾರಿನ ವಿಶೇಷತೆಗಳ ಕುರಿತಂತೆ ಜನರಲ್ಲಿ ಮಾಹಿತಿಯ ಕೊರತೆಯಿಂದಲೂ ಮಾರಾಟವು ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

'ಮಾರುತಿ ಆಲ್ಟೊ ಕೆ10' ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿದಾರರಿಗೆ ಲಭ್ಯವಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ (LXI), ವಿಎಕ್ಸ್ಐ (VXI) ಮತ್ತು ವಿಎಕ್ಸ್ಐ ಪ್ಲಸ್ (VXI Plus) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಪ್ರೀಮಿಯಂ ಅರ್ಥ್ ಗೋಲ್ಡ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಆಲ್ಟೊ ಕೆ10' ಕಾರು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,530 ಮಿ.ಮೀ ಉದ್ದ, 1,490 ಮಿ.ಮೀ ಅಗಲ ಮತ್ತು 1,520 ಮಿ.ಮೀ ಎತ್ತರವಿದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,210 ಕೆಜಿ ತೂಕವಿದೆ.
ಈ ಕಾರು ಶಕ್ತಿಯುತ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 67.6 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್, 55.92 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಇದು ರೂಪಾಂತರಗಳಿಗೆ ಅನುಗುಣವಾಗಿ 24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಕೀಲೆಸ್ ಎಂಟ್ರಿನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಹ್ಯಾಚ್‌ಬ್ಯಾಕ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.


Click it and Unblock the Notifications








