ಹೊಸ ಮಾರುತಿ ಆಲ್ಟೊ ಕೆ10 ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, ಅತಿ ಕಡಿಮೆ EMI ದರ!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದು ಎಂದೇ ಹೆಸರುವಾಗಿದೆ. ಈ ಕಾರು, ಫೆ.1ಕ್ಕೆ ಅನ್ವಯವಾಗುವಂತೆ ರೂ.8,500 ರಿಂದ ರೂ.19,500 ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ದರ ಹೆಚ್ಚಳದ ನಂತರ, ನೂತನ ಆಲ್ಟೊ ಕೆ10 ಕಾರು ರೂ.4.09 ಲಕ್ಷದಿಂದ ರೂ.5.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಆಲ್ಟೊ ಕೆ10 ಉತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ (ಒ) ಪೆಟ್ರೋಲ್ ರೂಪಾಂತರ, ರೂ.4.90 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿ ಮಾಡಿದರೆ, ರೂ. 2.90 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ ಮಾಸಿಕ ರೂ.6,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Alto K10 Price Revised New On Road Rate And Emi Details

ಮಾರುತಿ ಆಲ್ಟೊ ಕೆ10 ಕಾರಿನ ಎಲ್ಎಕ್ಸ್ಐ (ಒ) ಪೆಟ್ರೋಲ್ ರೂಪಾಂತರ, ರೂ.5,90 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.3,90 ಲಕ್ಷ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.7,900 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ ವಿಎಕ್ಸ್ಐ (ಒ) ಪೆಟ್ರೋಲ್ ರೂಪಾಂತರ, ರೂ.6.20 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.4.20 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ ಮಾಸಿಕ ರೂ.8,500 ವರೆಗೆ ಇಎಂಐ ಕಟ್ಟಬೇಕು.

Maruti Suzuki Alto K10 Price Revised New On Road Rate And Emi Details

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಕಾರಿನ ವಿಎಕ್ಸ್ಐ ಪ್ಲಸ್ (ಒ) ರೂಪಾಂತರ, ರೂ.6.60 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.4.60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.9,300 ವರೆಗೆ ಇಎಂಐ ಪಾವತಿ ಮಾಡಬೇಕು.

ಹೊಸ ಮಾರುತಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಒ) ಸಿಎನ್‌ಜಿ ರೂಪಾಂತರ, ರೂ.7 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ, ತೆಗೆದುಕೊಂಡರೆ, ರೂ.5 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ ಮಾಸಿಕ 10,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Alto K10 Price Revised New On Road Rate And Emi Details

ಮಾರುತಿ ಆಲ್ಟೊ ಕೆ10 ವಿಶೇಷತೆಗಳೇನು: ಈ ಕಾರು 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ವ್ಯವಸ್ಥೆಯಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 214 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್, ಸಾಲಿಡ್ ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಬಣ್ಣಗಳನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಕಾರ್‌ಪ್ಲೇ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Saturday, February 8, 2025, 11:11 [IST]
English summary
Maruti suzuki alto k10 price revised new on road rate and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+