Maruti Alto: 34 ಕಿ.ಮೀ ಮೈಲೇಜ್, 5-ಸೀಟರ್.. 3.99 ಲಕ್ಷದ ಮಾರುತಿ ಆಲ್ಟೊ ಕಾರಿಗೆ ಕ್ಯೂ ನಿಂತ ಗ್ರಾಹಕರು!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಸಹ ಈ ಕಾರನ್ನು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. 2023ರಲ್ಲಿ ನಿಧಾನಗತಿಯಲ್ಲಿದ್ದ ಆಲ್ಟೊ ಕಾರಿನ ಮಾರಾಟ ಪ್ರಮಾಣ, 2024ರಲ್ಲಿ ಸುಧಾರಿಸಿದೆ. ಡಿಸೆಂಬರ್‌ನಲ್ಲಿಯೂ ಈ ಕಾರು ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಡಿಸೆಂಬರ್‌ - 2024) ಮಾರುತಿ ಸುಜುಕಿ ಇಂಡಿಯಾ, ಬರೋಬ್ಬರಿ 7,410 ಯುನಿಟ್ ಆಲ್ಟೊ ಕೆ10 ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 2,497 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 197% ಪ್ರಗತಿಯನ್ನು ಸಾಧಿಸಲಾಗಿದೆ.

Maruti Suzuki Alto K10 Sales In December 2024 Tremendously 197 Percent Growth Details

ಇದು ಮಾತ್ರವಲ್ಲದೆ ನವೆಂಬರ್‌ನಲ್ಲಿ 7,467 ಯುನಿಟ್‌, ಅಕ್ಟೋಬರ್‌ನಲ್ಲಿ 8,548 ಯುನಿಟ್, ಸೆಪ್ಟೆಂಬರ್‌ನಲ್ಲಿ 8,655 ಯುನಿಟ್, ಆಗಸ್ಟ್‌ನಲ್ಲಿ 8,546 ಯುನಿಟ್ ಮತ್ತು ಜುಲೈನಲ್ಲಿ 7,353 ಯುನಿಟ್‌ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ಗಳನ್ನು ಗ್ರಾಹಕರು ಕೊಂಡುಕೊಂಡಿದ್ದಾರೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಆಲ್ಟೊ ಕೆ10 ಕಾರು, ಕನಿಷ್ಠ ರೂ.3.99 ಲಕ್ಷ ಹಾಗೂ ಗರಿಷ್ಠ ರೂ.5.96 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಸ್ಟ್ಯಾಂಡರ್ಡ್, ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಟಾಲಿಕ್ ಸಿಜ್ಲಿಂಗ್ ರೆಡ್ & ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Alto K10 Sales In December 2024 Tremendously 197 Percent Growth Details

ಈ ಕಾರು 1-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಪ್ರಯಾಣ ಮಾಡಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 214 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಕಾರ್‌ಪ್ಲೇ, ಎಂಜಿನ್ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Maruti Suzuki Alto K10 Sales In December 2024 Tremendously 197 Percent Growth Details

ಇನ್ನು, ಸೆಡಾನ್ ಹಾಗೂ ಎಸ್‌ಯುವಿಗಳ ಅಬ್ಬರದಿಂದ ಹ್ಯಾಚ್‌ಬ್ಯಾಕ್‌ಗಳ ಮಾರಾಟ ಕುಸಿತವಾಗುತ್ತಿದೆ. ಆದರೂ ಕಡಿಮೆ ಬೆಲೆಯನ್ನು ಹೊಂದಿರುವುದರಿಂದ 'ಮಾರುತಿ ಸುಜುಕಿ ಆಲ್ಟೊ ಕೆ10' ಮಾರಾಟ ಮಾತ್ರ ನಿಧಾನವಾಗಿ ಹೆಚ್ಚಳವಾಗುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಈ ಜನವರಿಯಲ್ಲಿಯೂ ಆಲ್ಟೊ ಕಾರಿನ ಮಾರಾಟ ಪ್ರಮಾಣ ಮತ್ತಷ್ಟು ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 14, 2025, 15:14 [IST]
English summary
Maruti suzuki alto k10 sales in december 2024 tremendously 197 percent growth details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+