34 ಕಿ.ಮೀ ಮೈಲೇಜ್.. 3.70 ಲಕ್ಷ, ಈ ಜನಪ್ರಿಯ ಮಾರುತಿ ಕಾರನ್ನು ಖರೀದಿಸಲು ಗ್ರಾಹಕರ ಹಿಂದೇಟು.. ಕಾರಣವೇನು?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ಮಧ್ಯಮ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ನೋಡುಗರ ಕಣ್ಣು ಕುಕ್ಕುವಂತಹ ಸರಳವಾದ ವಿನ್ಯಾಸವನ್ನು ಹೊಂದಿದೆ. ಅದಕ್ಕೆ ತಕ್ಕಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದ್ದು, ಅದು ಈ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 5,434 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 8,655 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -37% ಇಳಿಮುಖವಾಗಿದೆ.
ಹೊಸ 'ಮಾರುತಿ ಆಲ್ಟೊ ಕೆ10' ಹ್ಯಾಚ್‌ಬ್ಯಾಕ್ ಮಾರಾಟ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಖರೀದಿದಾರರು ಎಸ್‌ಯುವಿ ಕೊಂಡುಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ. ಜೊತೆಗೆ ಪರಿಷ್ಕ್ರತ ಜಿಎಸ್‌ಟಿ ತೆರಿಗೆ ದರಗಳು ಜಾರಿಗೊಂಡಿದ್ದು, ಈ ಕಾರಿನ ಬೆಲೆಯು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿದೆ. ಆದರೆ, ಖರೀದಿದಾರರಲ್ಲಿ ಅರಿವಿನ ಕೊರತೆಯಿಂದ 'ಆಲ್ಟೊ ಕೆ10' ಮಾರಾಟ ಪ್ರಮಾಣವು ಕುಸಿತವಾಗಿದೆ ಎನ್ನಲಾಗಿದೆ.

'ಮಾರುತಿ ಸುಜುಕಿ ಆಲ್ಟೊ ಕೆ10' ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.3.70 ಲಕ್ಷ ಹಾಗೂ ರೂ.5.45 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 13 ಇಂಚಿನ ವೀಲ್‌ಗಳನ್ನು ಒಳಗೊಂಡಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಪ್ರೀಮಿಯಂ ಅರ್ಥ್ ಗೋಲ್ಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಹೊಚ್ಚ ಹೊಸ 'ಮಾರುತಿ ಆಲ್ಟೊ' ಹೆಚ್ಚು ವಿಶಾಲವಾಗಿದೆ. 3,530 ಮಿ.ಮೀ ಉದ್ದ, 1490 ಮಿ.ಮೀ ಅಗಲ ಹಾಗೂ 1520 ಮಿ.ಮೀ ಎತ್ತರವಿದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 741 ಕೆಜಿ ತೂಕವಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 27 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ & ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಆಲ್ಟೊ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ - ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 3 - ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.


Click it and Unblock the Notifications








