ಮಾರುತಿ ಆಲ್ಟೋ vs ರೆನಾಲ್ಟ್ ಕ್ವಿಡ್: ಎರಡರ ಬೆಲೆಯೂ ಕಮ್ಮಿ.. ಯಾವುದು ಬೆಸ್ಟ್ ನೀವೇ ಹೇಳಿ?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹಾಗೂ ರೆನಾಲ್ಟ್ ಕ್ವಿಡ್ (Renault Kwid) ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳಾಗಿವೆ. ಇವೆರೆಡು ಕಾರುಗಳು ಹೆಚ್ಚು ಆಕರ್ಷಕವಾಗಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಖರೀದಿದಾರರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ.
ಬೆಲೆ (Price):
ಈ ಕಾರುಗಳು ಅಗ್ಗದ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತವೆ. 'ಮಾರುತಿ ಆಲ್ಟೊ ಕೆ10' ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ರೆನಾಲ್ಟ್ ಕ್ವಿಡ್' ರೂ.4.30 ಲಕ್ಷದಿಂದ ರೂ.5.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ 'ಆಲ್ಟೊ ಕೆ10' ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ.

ವಿನ್ಯಾಸ (Design):
ಇವೆರೆಡು ಹ್ಯಾಚ್‌ಬ್ಯಾಕ್‌ಗಳು ಒಂದಕ್ಕಿಂತ ಒಂದು ಅದ್ಬುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಆಲ್ಟೊ ಕೆ10' ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಜ್ಲಿಂಗ್ ರೆಡ್ ಹಾಗೂ ಪ್ರೀಮಿಯಂ ಅರ್ಥ್ ಗೋಲ್ಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,380 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
'ರೆನಾಲ್ಟ್ ಕ್ವಿಡ್' ಸಹ ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ ಹಾಗೂ ಮೂನ್‌ಲೈಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 184 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2422 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರುಗಳು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 'ಆಲ್ಟೊ' 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಹಾಗೆಯೇ 'ಕ್ವಿಡ್' 279 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಆಲ್ಟೊಗೆ ಹೋಲಿಕೆ ಮಾಡಿದರೆ, ಕ್ವಿಡ್ ಕೊಂಚ ದೊಡ್ಡದಾಗಿರುವ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Permanence):
ಇವೆರೆಡು ಹ್ಯಾಚ್‌ಬ್ಯಾಕ್‌ಗಳು ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಮಾರುತಿ ಆಲ್ಟೊ' 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.
'ರೆನಾಲ್ಟ್ ಕ್ವಿಡ್' 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 21 ರಿಂದ 22 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಕ್ವಿಡ್ ಕಾರಿಗೆ ಹೋಲಿಕೆ ಮಾಡಿದರೆ, ಆಲ್ಟೊ ಹೆಚ್ಚಿನ ದೂರ ಕ್ರಮಿಸಬಲ್ಲದು.
ವೈಶಿಷ್ಟ್ಯಗಳು (Features):
ಈ ಕಾರುಗಳು ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. 'ಆಲ್ಟೊ' 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ಚೈಲ್ಡ್ ಪ್ರೂಫ್ ರೇರ್ ಡೋರ್ ಲಾಕ್‌ಗಳನ್ನು ಒಳಗೊಂಡಿದೆ.
'ಕ್ವಿಡ್' 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀ ಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಪಡೆದಿದೆ.


Click it and Unblock the Notifications








