ಬೈಕ್‌ನಂತೆ 30 Km ಮೈಲೇಜ್.. 6.70 ಲಕ್ಷ ರೂಪಾಯಿ ಈ Maruti ಕಾರಿಗೆ ಪೂರ್ತಿ ಡಿಮ್ಯಾಂಡ್, ಜನ ಮುಗಿಬಿದ್ದು ಖರೀದಿ!
ಮಾರುತಿ ಸುಜುಕಿ ಬಲೆನೊ (Maruti Suzuki Baleno), ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಉತ್ತಮ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ನೆಕ್ಸಾ ಡೀಲರ್‌ಶಿಪ್ ಮೂಲಕ ಖರೀದಿಗೆ ಲಭ್ಯವಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಆಗಸ್ಟ್ ತಿಂಗಳು 'ಬಲೆನೊ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 12,549 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 12,485 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 0.51% ಪ್ರಗತಿಯಾಗಿದೆ.
ಮಾರುತಿ ಸುಜುಕಿ ಬಲೆನೊ ವಿಶೇಷತೆಗಳೇನು:
ಸದ್ಯ ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.6.74 ಲಕ್ಷ ಹಾಗೂ ಗರಿಷ್ಠ ರೂ.9.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಕೇಂದ್ರ ಸರ್ಕಾರವು ಹೊಸ ಕಾರುಗಳ ಖರೀದಿ ಮೇಲೆ ವಿಧಿಸುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ಶೇಕಡ 28% ರಿಂದ 18% ಕಡಿತಗೊಳಿಸಿದೆ. ನೂತನ ತೆರಿಗೆ ದರವು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ನಂತರದಲ್ಲಿ 'ಬಲೆನೊ' ಕಾರಿನ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ.

ಈ ಕಾರು ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 16 ಇಂಚಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಇದು ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್, ಒಪುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 3,990 ಎಂಎಂ ಉದ್ದ, 1,745 ಎಂಎಂ ಅಗಲ ಹಾಗೂ 1,500 ಎಂಎಂ ಎತ್ತರವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 960 ಕೆಜಿ ತೂಕವಿದೆ.

ನೂತನ ಬಲೆನೊ 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಶಕ್ತಿಯುತವಾಗಿರುವ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ಇದು 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 9 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೋಲ್ಡ್ - ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ ಬಲೆನೊ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಇದಕ್ಕೆ ಟೊಯೋಟಾ ಗ್ಲಾನ್ಜಾ ಹಾಗೂ ಟಾಟಾ ಆಲ್ಟ್ರೋಜ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








