ಹ್ಯಾಚ್‌ಬ್ಯಾಕ್‌ಗಳನ್ನು ಖರೀದಿಸುತ್ತಿಲ್ಲ ಅಂದೋರು ಯಾರು? ಈ 6 ಲಕ್ಷದ ಮಾರುತಿ ಕಾರಿಗೆ ಮುಗಿಬಿದ್ದ ಗ್ರಾಹಕರು!
ಮಾರುತಿ ಸುಜುಕಿ ಬಲೆನೊ (Maruti Suzuki Baleno), ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಮತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಜುಲೈ ತಿಂಗಳು 'ಬಲೆನೊ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 12,600 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.
ಈ ವರ್ಷದ ಮೊದಲ 6 ತಿಂಗಳಲ್ಲೂ 'ಮಾರುತಿ ಸುಜುಕಿ ಬಲೆನೊ' ಹ್ಯಾಚ್‌ಬ್ಯಾಕ್ ಉತ್ತಮವಾಗಿಯೇ ಮಾರಾಟವಾಗಿದೆ. ಬರೋಬ್ಬರಿ 61,601 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಿ ಸುಮಾರು 10,266 ಯುನಿಟ್‌ಗಳನ್ನು ಮಾರಲಾಗಿದೆ.

ಮಾರುತಿ ಸುಜುಕಿ ಬಲೆನೊ ವಿಶೇಷತೆಗಳೇನು:
ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ರೂ.6.70 ಲಕ್ಷದಿಂದ ರೂ.9.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & 15-ಇಂಚಿರುವ ಸ್ಟೀಲ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್, ಒಪುಲೆಂಟ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಬಲೆನೊ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್/ಸಿಎನ್‌ಜಿ ಎಂಜಿನ್, 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಇದು 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 170 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications