ಮೂಗು ಮುರಿಯುವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ: Maruti Baleno 6 ಏರ್‌ಬ್ಯಾಗ್‌ನೊಂದಿಗೆ ಬಿಡುಗಡೆ, ಬೆಲೆ ಎಷ್ಟು?

ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಬನ್ನಿ, ಆ ಬಗ್ಗೆ ಇಲ್ಲಿದೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ರೂಪಾಂತರಗಳು (ವೇರಿಯೆಂಟ್) ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ನೊಂದಿಗೆ ಖರೀದಿಗೆ ದೊರೆಯಲಿವೆ. ಹೀಗಾಗಿ, ಈ ಬಲೆನೊ ಕಾರಿನ ದರವನ್ನು 0.5% ಹೆಚ್ಚಳ ಮಾಡಲಾಗಿದ್ದು, ರೂ.6.70 ಲಕ್ಷದಿಂದ 9.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Maruti Suzuki Baleno Launched With 6 Airbags As Standard Rs 6 70 Lakh Starting Price Details

ಈಚೆಗೆ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP), ಇದೇ ಮಾರುತಿ ಸುಜುಕಿ ಬಲೆನೊವನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿತು. ಜೊತೆಗೆ ವಿವಿಧ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ, 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿತ್ತು.

ನೂತನ ಮಾರುತಿ ಸುಜುಕಿ ಬಲೆನೊ 6 ಏರ್‌ಬ್ಯಾಗ್‌ನೊಂದಿಗೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, 3 - ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Maruti Suzuki Baleno Launched With 6 Airbags As Standard Rs 6 70 Lakh Starting Price Details

ಈ ಕಾರು ಹೊರಭಾಗದಲ್ಲೂ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರೊಂದಿಗೆ 3990 ಎಂಎಂ ಉದ್ದ, 1745 ಎಂಎಂ ಅಗಲ & 1500 ಎಂಎಂ ಎತ್ತರವು ಇದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2498 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ ಮಾರುತಿ ಬಲೆನೊ ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಪಾ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Maruti Suzuki Baleno Launched With 6 Airbags As Standard Rs 6 70 Lakh Starting Price Details

ಇದು ಅತ್ಯುತ್ತಮವಾದ ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನುಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ನೂತನ ಬಲೆನೊ ಅತ್ಯುತ್ತಮವಾದ ಕ್ಯಾಬಿನ್‌ನ್ನು ಒಳಗೊಂಡಿದೆ. ಅದಕ್ಕೆ ತಕ್ಕಂತೆ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್, ಫಾಸ್ಟ್ ಚಾರ್ಜಿಂಗ್ ಯುಎಸ್‌‍ಬಿ ಪೋರ್ಟ್‌ಗಳು ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇನ್ನು, ಈ ಮೊದಲು ಮಾರುತಿ ಸುಜುಕಿ ಬಲೆನೊ ಕಾರಿನ ಗರಿಷ್ಠ ಶ್ರೇಣಿ ರೂಪಾಂತರಗಳು (ಟಾಪ್ ಎಂಡ್ ವೇರಿಯೆಂಟ್) ಮಾತ್ರ 6 ಏರ್‌ಬ್ಯಾಗ್‌ನೊಂದಿಗೆ ಖರೀದಿ ಲಭ್ಯವಾಗುತ್ತಿದ್ದವು. ಉಳಿದ ರೂಪಾಂತರಗಳನ್ನು 2 ಏರ್‌ಬ್ಯಾಗ್‌ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತಿತ್ತು. ಪ್ರಸ್ತುತ ಎಲ್ಲ ರೂಪಾಂತರಗಳನ್ನು 6 ಏರ್‌ಬ್ಯಾಗ್‌ನೊಂದಿಗೆ ಮೇಲ್ದರ್ಜೆರಿಸಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ.

Article Published On: Thursday, July 17, 2025, 15:10 [IST]
English summary
Maruti suzuki baleno launched with 6 airbags as standard rs 6 70 lakh starting price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+