30.61 ಕಿ.ಮೀ ಮೈಲೇಜ್.. ಅಗ್ಗದ ಮಾರುತಿ ಬಲೆನೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಫೆ.1ಕ್ಕೆ ಅನ್ವಯವಾಗುವಂತೆ ಈ ಕಾರಿನ ಬೆಲೆಯನ್ನು ರೂ.9,000 ವರೆಗೆ ಏರಿಕೆ ಮಾಡಲಾಗಿದೆ. ದರ ಏರಿಕೆ ನಂತರ, ಈ ಕಾರು ಕನಿಷ್ಠ ರೂ.6.70 ಲಕ್ಷ ಹಾಗೂ ಗರಿಷ್ಠ ರೂ.9.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ನೂತನ ಕಾರನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದ್ರೆ, ಮಾರುತಿ ಬಲೆನೊ ಹೆಚ್ಚು ಸೂಕ್ತವಾಗಲಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸಿಗ್ಮಾ (ಪೆಟ್ರೋಲ್) ರೂಪಾಂತರ, ರೂ.8.35 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಖರೀದಿಸಿದರೆ, ರೂ.6.35 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.13,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Baleno Price Revised New On-Road Rate And Emi Details

ಮಾರುತಿ ಬಲೆನೊ ಕಾರಿನ ಡೆಲ್ಟಾ (ಪೆಟ್ರೋಲ್) ರೂಪಾಂತರ, ರೂ.9.35 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7.35 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಪಾವತಿಸಬೇಕು.

ಬಲೆನೊ ಹ್ಯಾಚ್‌ಬ್ಯಾಕ್‌ನ ಜಿಟಾ (ಪೆಟ್ರೋಲ್) ರೂಪಾಂತರ, ರೂ.10.50 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.8.50 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Baleno Price Revised New On-Road Rate And Emi Details

ಮಾರುತಿ ಸುಜುಕಿ ಬಲೆನೊ ಕಾರಿನ ಜಿಟಾ (ಸಿಎನ್‌ಜಿ) ರೂಪಾಂತರ, ರೂ.11.50 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.9.50 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.19.500 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್, 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Maruti Suzuki Baleno Price Revised New On-Road Rate And Emi Details

ನೂತನ ಬಲೆನೊ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ. ಜೊತೆಗೆ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ.

ಮಾರುತಿ ಬಲೆನೊ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್ ಮತ್ತು ಸಿಟ್ರನ್ ಸಿ3 ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.

ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Thursday, February 20, 2025, 12:34 [IST]
English summary
Maruti suzuki baleno price revised new on road rate and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+