ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು: ಈ ಮಾರುತಿ ಕಾರಿನ ಬೆಲೆ ಏರಿಕೆ ಶಾಕ್.. ಎಷ್ಟು?
ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿರುವುದರಿಂದ ಇವರ ಕಾರಿಗಳು ಮುಂಚೂಣಿಯಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಆಲ್ಟೊ ಕೆ10, ಸೆಲರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬ್ರೆಝಾ, ಎರ್ಟಿಗಾ, ಡಿಜೈರ್, ಫ್ರಾಂಕ್ಸ್ ಹಾಗೂ ಜಿಮ್ನಿ ಸೇರಿದಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಮಾರುತಿ ಸುಜುಕಿ ಕಂಪನಿಯು ಅರೆನಾ (Arena) ಹಾಗೂ ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ.
ಸದ್ಯ ಮಾರುತಿ ಸುಜುಕಿ ಕಾರುಗಳು ಹೆಚ್ಚು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಕಂಪನಿಯು ಎಲ್ಲ ಕಾರುಗಳ ದರವನ್ನು ಹೆಚ್ಚಿಸುವುದಾಗಿ ತಿಳಿಸಿದೆ. ಇದರಲ್ಲಿ ಜನಪ್ರಿಯ ಮಾರುತಿ ಸುಜುಕಿ ಬಲೆನೊ ಕಾರು ಬೆ ಏರಿಕೆಯನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಬಲೆನೊ ಕಾರಿನ ಬೆಲೆಯು ರೂ.5,000 ವರೆಗೆ ಬೆಲೆ ಏರಿಕೆಯಾಗಿದೆ.

ಈ ಮಾರುತಿ ಸುಜುಕಿ ಬಲೆನೊ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಹೊಸ ಮಾರುತಿ ಸುಜುಕಿ ಬಲೆನೊ ಸಿಗ್ಮಾ, ಡೆಲ್ಟಾ ಹಾಗೂ ಜಿಟಾ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ. ಈ ಪ್ರೀಮಿಯಂ ಕಾರು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಮಾರುತಿ ಕಾರಿನಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಮಾರುತಿ ಸುಜುಕಿ ಬಲೆನೊ (Maruti Suzuki Baleno) 2 ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಪವರ್ ಮತ್ತು 113 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬಲೆನೊ ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 77.5 ಪಿಎಸ್ ಪವರ್ ಹಾಗೂ 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 22.35 ರಿಂದ 22.94 ಕಿ.ಮೀ ಮತ್ತು ಸಿಎನ್‌ಜಿ ರೂಪಾಂತರಗಳು 30.61 ಕಿ.ಮೀ ವರೆಗೆ ಮೈಲೇಜ್ ಅನ್ನು ನೀಡುತ್ತವೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.
ಈ ಮಾರುತಿ ಬಲೆನೊ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಕೀಲೆಸ್ ಎಂಟ್ರಿಯನ್ನು ಪಡೆದಿದೆ.

ಈ ಮಾರುತಿ ಬಲೆನೊ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಿತ್ತದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್, ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಬಲೆನೊಗೆ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್ ಹಾಗೂ ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








