30 ಕಿ.ಮೀ ಮೈಲೇಜ್.. 5.99 ಲಕ್ಷ, ಈ ಜನಪ್ರಿಯ Maruti Car ಖರೀದಿಸಲು ಗ್ರಾಹಕರ ಹಿಂದೇಟು.. ಕಾರಣವೇನು?
ಮಾರುತಿ ಸುಜುಕಿ ಬಲೆನೊ (Maruti Suzuki Baleno), ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಆದರೂ ಸೆಪ್ಟೆಂಬರ್ ತಿಂಗಳು ಇದೇ 'ಬಲೆನೊ' ಮಾರಾಟ ಸಂಖ್ಯೆ ಕುಸಿತವಾಗಿದೆ. 13,173 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 14,292 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ-ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 7.83% ಇಳಿಕೆಯಾಗಿದೆ.
'ಮಾರುತಿ ಬಲೆನೊ' ಮಾರಾಟ ಸಂಖ್ಯೆ ಕುಂಠಿತವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಇದೇ ಬೆಲೆಗೆ ವಿವಿಧ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಖರೀದಿದಾರರು ಅವುಗಳತ್ತ ಮುಖ ಮಾಡಿದ್ದಾರೆ. ಜೊತೆಗೆ ಸೆ.22 ರಿಂದ ಜಿಎಸ್‌ಟಿ (GST) ಪರಿಷ್ಕರಣೆಗೊಂಡಿದೆ. ಆದರೆ, ಬಹುತೇಕರಿಗೆ ಈ ಕುರಿತಂತೆ ಗೊತ್ತಿರದ ಹಿನ್ನೆಲೆ, 'ಬಲೆನೊ' ಮಾರಾಟವು ಇಳಿಮುಖವಾಗಿದೆ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಬಲೆನೊ ವಿಶೇಷತೆಗಳೇನು:
ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.5.99 ಲಕ್ಷ ಹಾಗೂ ಗರಿಷ್ಠ ರೂ.9.10 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದವರಿಗೂ ಸುಲಭವಾಗಿ ಕೈಗೆಟುಕುತ್ತದೆ. ಸಿಗ್ಮಾ, ಡೆಲ್ಟಾ, ಜಿಟಾ & ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪುಲೆಂಟ್ ರೆಡ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಬಲೆನೊ' 3,990 ಮಿ.ಮೀ ಉದ್ದ, 1,745 ಮಿ.ಮೀ ಅಗಲ ಮತ್ತು 1,500 ಮಿ.ಮೀ ಎತ್ತರವಿದೆ. ಜೊತೆಗಿದು 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 960 ಕೆಜಿ ತೂಕವಿದೆ.
ಇದು ಬಲಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 22 ರಿಂದ 30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 37 ಲೀ. ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್, ರೇರ್ ಎಸಿ ವೆಂಟ್‌ಗಳು & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ 'ಬಲೆನೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








