25 Km ಮೈಲೇಜ್.. 8 ಲಕ್ಷ, 5-ಸೀಟರ್.. 'Maruti Brezza' ಕಾರು ಬೇಕು, ಬೇಕು ಎನ್ನುತ್ತಿದ್ದಾರೆ ಗ್ರಾಹಕರು.. ಕಾರಣವೇನು?

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಪ್ರಮುಖ ಎಸ್‌ಯುವಿಯಾಗಿ ಗುರುತಿಸಿಕೊಂಡಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಅತಿ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಮಾರಾಟ ವರದಿ ಪ್ರಕಟಗೊಂಡಿದೆ. ಅದರಲ್ಲಿ ಈ ಬ್ರೆಝಾ ಎಸ್‌ಯುವಿಯೂ ಇದ್ದು, ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮೊದಲ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (Hyundai Creta) ಹಾಗೂ ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಕಾರಿದೆ.

ಕಳೆದ ತಿಂಗಳು (ಏಪ್ರಿಲ್ - 2025) ಮಾರುತಿ ಸುಜುಕಿಯು ಸರಿ ಸುಮಾರು 16,971 ಯುನಿಟ್ ಬ್ರೆಜಾ ಕಾರುಗಳನ್ನು ಮಾರಾಟಗೊಳಿಸಿದೆ. ಅದೇ ರೀತಿಯಲ್ಲಿ ಮಾರ್ಚ್‌ನಲ್ಲಿ 16,546 ಯುನಿಟ್, ಫೆಬ್ರವರಿಯಲ್ಲಿ 15,392 ಯುನಿಟ್ ಮತ್ತು ಜನವರಿ ತಿಂಗಳಲ್ಲಿ 14,747 ಯುನಿಟ್‌ಗಳನ್ನು ಮಾರಾಟ ಮಾಡಿತ್ತು.

Maruti Suzuki Brezza April 2025 Sales Details

ಈ ಅಂಕಿ-ಸಂಖ್ಯೆಯನ್ನು ಲೆಕ್ಕಹಾಕಿದಾಗ ಪ್ರತಿ ತಿಂಗಳು 15,000ಕ್ಕೂ ಅಧಿಕ 'ಮಾರುತಿ ಸುಜುಕಿ ಬ್ರೆಝಾ' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಇದೇ 'ಮೇ' ತಿಂಗಳಲ್ಲೂ ಬ್ರೆಝಾ ಕಾರಿನ ಮಾರಾಟ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು, ಎಲ್ಲ ಜನಪ್ರಿಯ ಕಾರುಗಳನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೂ ಬಂದರೂ ಅಚ್ಚರಿಯಿಲ್ಲ.

ಮಾರುತಿ ಸುಜುಕಿ ಬ್ರೆಝಾ ಮಾರಾಟ ಸಂಖ್ಯೆ ಹೆಚ್ಚಳಗೊಳ್ಳಲು ನಾನಾ ಕಾರಣಗಳಿವೆ. ಈ ಕಾರು ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಅದಕ್ಕೆ ತಕ್ಕಂತೆ ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ನಿರ್ವಹಣಾ ವೆಚ್ಚವು ಅಷ್ಟೇನು ಜಾಸ್ತಿ ಇಲ್ಲ. ಹಾಗೆಯೇ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಮೈಲೇಜ್ ನೀಡುತ್ತದೆ. ಇವೆಲ್ಲ ಅಂಶಗಳಿಂದ ಬ್ರೆಝಾ ಕಾರಿನ ಮಾರಾಟ ಸಂಖ್ಯೆ ಅಧಿಕಗೊಂಡಿದೆ ಎಂದು ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ.

Maruti Suzuki Brezza April 2025 Sales Details

ಮಾರುತಿ ಸುಜುಕಿ ಬ್ರೆಝಾ ಕಾರಿನ ವಿಶೇಷತೆಗಳೇನು..

ಈ ಎಸ್‌ಯುವಿಯು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಇದು ಹತ್ತಿರತ್ತಿರ ರೂ.8 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಮ್ಯಾಗ್ಮಾ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಮಾರುತಿ ಬ್ರೆಝಾ ಹೆಚ್ಚು ಬಲಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಹೊಂದಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Maruti Suzuki Brezza April 2025 Sales Details

ನೂತನ ಮಾರುತಿ ಬ್ರೆಝಾ ಕಾರು, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಹಾಗೂ 6-ಸ್ಪೀಕರ್ ಸೆಟಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 7, 2025, 8:21 [IST]
English summary
Maruti suzuki brezza april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+