25 ಕಿ.ಮೀ ಮೈಲೇಜ್.. 8 ಲಕ್ಷ, 5-ಸೀಟರ್.. ಈ Maruti Suv ಬೇಕೆಂದು ಹಠ ಹಿಡಿದ ಗ್ರಾಹಕರು.. ಹೆಚ್ಚಾಯ್ತು ಬೇಡಿಕೆ!

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ವಿಶ್ವಾಸಾರ್ಹ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ತನ್ನದೇ ಆದ ಛಾಪನ್ನು ಮೂಡಿಸಿದೆ. ಈ ಕಾರು ಅತ್ಯುತ್ತಮವಾದ ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಿಂದಲೇ ಹೆಚ್ಚಿನ ಗ್ರಾಹಕರ ಗಮನವನ್ನು ಸೆಳೆದಿದೆ. ಇತ್ತೀಚೆಗೆ ಈ ಜೂನ್ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಇದೇ 'ಬ್ರೆಝಾ' 3ನೇ ಸ್ಥಾನದಲ್ಲಿದ್ದು, 14,507 ಯುನಿಟ್‌ಗಳನ್ನು ಮಾರಲಾಗಿದೆ. ಆದರೆ 15,786 ಯುನಿಟ್‌ಗಳೊಂದಿಗೆ ಹ್ಯುಂಡೈ ಕ್ರೆಟಾ ಮೊದಲ ಸ್ಥಾನದಲ್ಲಿದ್ದರೆ, 15,484 ಯುನಿಟ್‌ಗಳೊಂದಿಗೆ ಮಾರುತಿ ಸುಜುಕಿ ಡಿಜೈರ್ ಎರಡನೇ ಸ್ಥಾನದಲ್ಲಿದೆ.

ಈ ವರ್ಷದ ಮೊದಲ 5 ತಿಂಗಳಲ್ಲೂ 'ಮಾರುತಿ ಸುಜುಕಿ ಬ್ರೆಝಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಮೇನಲ್ಲಿ 15,566 ಯುನಿಟ್, ಏಪ್ರಿಲ್‌ನಲ್ಲಿ 16,971 ಯುನಿಟ್, ಮಾರ್ಚ್‌ನಲ್ಲಿ 16,546 ಯುನಿಟ್, ಫೆಬ್ರವರಿಯಲ್ಲಿ 15,392 ಯುನಿಟ್ ಮತ್ತು ಜನವರಿಯಲ್ಲಿ 14,747 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Maruti Suzuki Brezza June 2025 Sales Details

ಮಾರುತಿ ಸುಜುಕಿ ಬ್ರೆಝಾ ವಿಶೇಷತೆಗಳೇನು:

ಈ ಎಸ್‌ಯುವಿ ಅತಿ ಕಡಿಮೆ ಬೆಲೆಗೆ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.8.69 ಲಕ್ಷ ಮತ್ತು ಗರಿಷ್ಠ ರೂ.14.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಬ್ರೆಝಾ ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರು 3995 ಎಂಎಂ ಉದ್ದ, 1790 ಎಂಎಂ ಅಗಲ, 1685 ಎಂಎಂ ಎತ್ತರವು ಇದೆ. ಜೊತೆಗೆ 198 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Brezza June 2025 Sales Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 48 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ಇಲ್ಲದ ರೀತಿಯಲ್ಲಿ 17 ರಿಂದ 25 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

Maruti Suzuki Brezza June 2025 Sales Details

ಹೊಸ ಬ್ರೆಝಾ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದ್ದು, ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್ಸ್-ಅಪ್ ಡಿಸ್​ಪ್ಲೇ, ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೂಲ್ಡ್ ಗ್ಲೋವ್‌ಬಾಕ್ಸ್, ರೇರ್ ಸೀಟ್ ಸೆಂಟರ್ ಆರ್ಮ್‌ರೆಸ್ಟ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360 ಡಿಗ್ರಿ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

Article Published On: Saturday, July 5, 2025, 14:34 [IST]
English summary
Maruti suzuki brezza june 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+