25 ಕಿ.ಮೀ ಮೈಲೇಜ್.. 5-ಸೀಟರ್.. 8 ಲಕ್ಷದ ಈ Maruti Suv ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಪ್ರಮುಖ ಎಸ್‌ಯುವಿಯಾಗಿದೆ. ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕನಿಷ್ಠ ರೂ.8.69 ಲಕ್ಷ ಹಾಗೂ ಗರಿಷ್ಠ ರೂ.14.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಬ್ರೆಝಾ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ, ಇದೇ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಎಸ್‌ಯುವಿಯು ಹಲವು ವಿಧದಲ್ಲಿ ಲಭ್ಯವಿದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.10.42 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.7.42 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.11.66 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8.66 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಪಾವತಿಸಬೇಕು.
ಇನ್ನೊಂದು ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.15.57 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.12.57 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.25,000 ವರೆಗೆ ಇಎಂಐ ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.11.58 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.8.57 ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮಾರುತಿ ಸುಜುಕಿ ಬ್ರೆಝಾ ವಿಶೇಷತೆಗಳೇನು:
ಈ ಎಸ್‌ಯುವಿಯು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್ ಲೈಟ್‌ಗಳು ಮತ್ತು 16-ಇಂಚಿರುವ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಬ್ರೇವ್ ಖಾಕಿ, ಎಕ್ಸಲರೆಂಟ್ ಬ್ಲೂ, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ & ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೆ ಸಿಗುತ್ತದೆ.

ಇದು 3995 ಎಂಎಂ ಉದ್ದ, 1790 ಎಂಎಂ ಅಗಲ ಮತ್ತು 1685 ಎಂಎಂ ಎತ್ತರ ಕೂಡ ಇದೆ. 200 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5-ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ಬ್ರೆಝಾ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17.80 ರಿಂದ 25.51 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್-ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೇರ್ ಸೀಟ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ಎಸ್‌ಯುವಿಯ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications