ಸೇಫ್ಟಿಗೂ ಸೈ.. ಹೊಸ ಮಾರುತಿ ಸುಜುಕಿ ಬ್ರೆಝಾ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್‌ಯುವಿಯಾಗಿ ಹೆಸರುವಾಗಿದೆ. ಫೆಬ್ರವರಿ 1ಕ್ಕೆ ಅನ್ವಯವಾಗುವಂತೆ ಈ ಕಾರಿನ ಬೆಲೆಯನ್ನು ರೂ.20,000 ವರೆಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ರೂ.8.54 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಕಾರನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಬ್ರೆಝಾ ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಬ್ರೆಝಾ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.10 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಸರಿ ಸುಮಾರು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಖರೀದಿಸಿದರೆ, ರೂ.8 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.16,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಬ್ರೆಝಾ ಎಸ್‌ಯುವಿಯ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.11.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.9.60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.19.500 ವರೆಗೆ ಇಎಂಐ ಪಾವತಿಸಬೇಕು.
ಬ್ರೆಝಾ ಕಾರಿನ ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.15.60 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.13.60 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.27,500 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಯ ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.11 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.9 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ 18,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮಾರುತಿ ಬ್ರೆಝಾ ವಿಶೇಷತೆಗಳೇನು: ನೂತನ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಪರ್ಲ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಇದು 5 ಆಸನ ವ್ಯವಸ್ಥೆಯನ್ನು ಪಡೆದಿದ್ದು, 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರೊಟ್ಟಿಗೆ ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ತನ್ನದಾಗಿಸಿಕೊಂಡಿದೆ.

ನೂತನ ಮಾರುತಿ ಬ್ರೆಝಾ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಸಿಂಗಲ್-ಪೇನ್ ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications