25 ಕಿ.ಮೀ ಮೈಲೇಜ್.. 8 ಲಕ್ಷ, ಆದರೂ ಈ ಜನಪ್ರಿಯ ಮಾರುತಿ ಕಾರನ್ನು ಜನ ಮುಗಿಬಿದ್ದು ತೆಗೆದುಕೊಂಡಿಲ್ಲ.. ಯಾಕೆ?

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಇದನ್ನು ಅರೆನಾ ಡೀಲರ್‌ಶಿಪ್‌ ಮೂಲಕ ಮಾರಾಟಗೊಳಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ 'ಬ್ರೆಝಾ' ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಈ ಸೆಪ್ಟೆಂಬರ್ ತಿಂಗಳಲ್ಲೂ ಅದು ಮುಂದುವರಿದಿದೆ. 10,173 ಯುನಿಟ್‌ಗಳನ್ನು ಮಾತ್ರ ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 15322 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -33.61% ಇಳಿಕೆಯಾಗಿದೆ.

ಸೆಪ್ಟೆಂಬರ್‌ನಲ್ಲಿ ಹೊಸ 'ಮಾರುತಿ ಬ್ರೆಝಾ' ಮಾರಾಟ ಸಂಖ್ಯೆ ಕುಂಠಿತವಾಗಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ, ಇದೇ ಕಾರಿನ ಬೆಲೆಯ ಆಸುಪಾಸಿನಲ್ಲಿ ಇತರೆ ಕಂಪನಿಯ ಎಸ್‌ಯುವಿಗಳು ಕೂಡ ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳತ್ತ ಮುಖ ಮಾಡಿದ್ದಾರೆ. ವಿಶೇಷವಾಗಿ 'ಮಾರುತಿ ಸುಜುಕಿ ವಿಕ್ಟೋರಿಸ್' ಕಾರು ಮಾರಾಟಕ್ಕೆ ಬಂದಿದೆ. ಇದರೊಂದಿಗೆ ಜಿಎಸ್‌ಟಿ ಪರಿಷ್ಕರಣೆ ಬಳಿಕ 'ಬ್ರೆಝಾ'ದ ಹೊಸ ದರದ ಕುರಿತಂತೆ ಜನರಲ್ಲಿ ಮಾಹಿತಿಯ ಕೊರತೆಯಿಂದ ಮಾರಾಟವು ಇಳಿಮುಖವಾಗಿದೆ ಎಂದು ಹೇಳಲಾಗಿದೆ.

Maruti Suzuki Brezza September 2025 Sales Report

'ಮಾರುತಿ ಸುಜುಕಿ ಬ್ರೆಝಾ' ವಿಶೇಷತೆಗಳೇನು:

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.8.26 ಲಕ್ಷದಿಂದ ರೂ.13.01 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಎಕ್ಸೂಬೆರಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಡುಯಲ್-ಟೋನ್ ಬಣ್ಣಗಳೊಂದಿಗೂ ಸಿಗುತ್ತದೆ.

Maruti Suzuki Brezza September 2025 Sales Report

ನೂತನ 'ಬ್ರೆಝಾ' ದೊಡ್ಡ ಗಾತ್ರದ ಕಾರಾಗಿದೆ. 3,995 ಮಿ.ಮೀ ಉದ್ದ, 1,790 ಮಿ.ಮೀ ಅಗಲ ಹಾಗೂ 1,685 ಮಿ.ಮೀ ಎತ್ತರವಿದೆ. ಜೊತೆಗಿದು 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,500 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,150 ಕೆಜಿ ತೂಕವಿದೆ.

ಈ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 101 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 17.80 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

Maruti Suzuki Brezza September 2025 Sales Report

ಇನ್ನೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.80 ರಿಂದ 19.89 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಮತ್ತೊಂದು 1.5-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 25.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಹೊಸ 'ಬ್ರೆಝಾ' 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 328 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Thursday, October 23, 2025, 8:30 [IST]
English summary
Maruti suzuki brezza september 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+