25 Km ಮೈಲೇಜ್.. 5-ಸೀಟರ್, 8 ಲಕ್ಷ.. ಆದ್ರೂ ಈ ಮಾರುತಿ ಕಾರನ್ನು ಖರೀದಿಸಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಮೆಚ್ಚಿದ ಕಾಂಪ್ಯಾಕ್ಟ್ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ & ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಆದರೂ ಈ ಆಗಸ್ಟ್ ತಿಂಗಳಲ್ಲಿ 'ಬ್ರೆಝಾ' ಮಾರಾಟ ಸಂಖ್ಯೆಯು ಇಳಿಕೆಯಾಗಿದೆ. ಒಟ್ಟು 13,620 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 19,190 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -29.03% ಕುಸಿತವಾಗಿದೆ.
ನೂತನ ಮಾರುತಿ ಬ್ರೆಝಾ ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಆದಾಗಲೇ ಹೊಸ ಕಾರುಗಳ ಖರೀದಿ ಮೇಲೆ ಜಿಎಸ್‌ಟಿ ಪ್ರಮಾಣವು ಕಡಿತಗೊಳ್ಳಲಿದೆ ಎಂಬ ಸುಳಿವು ಖರೀದಿದಾರರಿಗೆ ಲಭ್ಯವಾಗಿತ್ತು. ಜೊತೆಗೆ ಗ್ರಾಹಕರು ಇದೇ ಬೆಲೆಗೆ ಸಿಗುವ ಮತ್ತಷ್ಟು ಹೊಸ ಎಸ್‌ಯುವಿಗಳನ್ನು ಅನ್ವೇಷಿಸುತ್ತಿದ್ದಾರೆ. ಹೀಗಾಗಿ, ಬ್ರೆಝಾ ಮಾರಾಟವು ಕುಂಠಿತವಾಗಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ವಿಶೇಷತೆಗಳೇನು:
ಪ್ರಸ್ತುತ ಈ ಎಸ್‌ಯುವಿಯು ಕನಿಷ್ಠ ರೂ.8.69 ಲಕ್ಷ ಹಾಗೂ ಗರಿಷ್ಠ ರೂ.14.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಕೇಂದ್ರ ಸರ್ಕಾರವು ನೂತನ ಕಾರುಗಳ ಮೇಲಿನ ಜಿಎಸ್‌ಟಿಯನ್ನು ದೊಡ್ಡ ಮಟ್ಟದಲ್ಲಿ ಇಳಿಸಿದೆ. ಪರಿಷ್ಕೃತ ತೆರಿಗೆ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಆ ಬಳಿಕ ಬ್ರೆಝಾ ಬೆಲೆಯು ಮತ್ತಷ್ಟು ಇಳಿಕೆಯಾಗಲಿದೆ.
ಇದು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ & ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ನೋಡುಗರ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಬ್ರೇವ್ ಖಾಖಿ, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಬ್ರೆಝಾ ವಿಶಾಲ ಗಾತ್ರದಲ್ಲಿದೆ. 3,995 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,685 ಎಂಎಂ ಎತ್ತರವಿದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮಾತು 2,500 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಜೊತೆಗೆ 1,150 ಎಂಎಂ ತೂಕ ಸಹ ಇದೆ.
ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 17 ರಿಂದ 25.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೂಲ್ಡ್ ಗ್ಲೋವ್‌ಬಾಕ್ಸ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ ಬ್ರೆಝಾ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ - ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








