25.51 Km ಮೈಲೇಜ್.. 8 ಲಕ್ಷ, 5-ಸೀಟರ್.. ಈ ಮಾರುತಿ ಕಾರನ್ನು ಎಲ್ಲರೂ ಮೆಚ್ಚುವರು!

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ, ಬಹುತೇಕ ಎಲ್ಲ ವಾಹನ ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಎಸ್‌ಯುವಿ ವಿಭಾಗದಲ್ಲಿ ಈ ಮಾರುತಿ ಬ್ರೆಝಾ ಜಾಗ ಸಂಪಾದಿಸಿದ್ದು, ಮೂರನೇ ಸ್ಥಾನದಲ್ಲಿದೆ. ವಿಶೇಷವಾಗಿ ಮಾರುತಿ ಫ್ರಾಂಕ್ಸ್ (21,461 ಯುನಿಟ್) ಮೊದಲ ಸ್ಥಾನದಲ್ಲಿದ್ದರೆ, ಹ್ಯುಂಡೈ ಕ್ರೆಟಾ (16,317 ಯುನಿಟ್) ಎರಡನೇ ಸ್ಥಾನದಲ್ಲಿದೆ.

ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ ಕಂಪನಿಯು ಬರೋಬ್ಬರಿ 15,392 ಯುನಿಟ್ 'ಬ್ರೆಝಾ' ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 15,765 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ -2% ಮಾರಾಟ ಪ್ರಮಾಣ ಕುಸಿತವಾಗಿದೆ... ಇದರ ಹಿಂದಿನ ನಿಖರವಾದ ಕಾರಣವನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಜನವರಿಯಲ್ಲಿ 14,747 ಯುನಿಟ್ ಬ್ರೆಝಾ ಎಸ್‌ಯುವಿಗಳು ಮಾರಾಟವಾಗಿದ್ದವು.

Maruti Suzuki Brezza Suv February 2025 Sales Details

2024ರ ದ್ವಿತೀಯಾರ್ಧದಲ್ಲೂ ಮಾರುತಿ ಸುಜುಕಿ ಬ್ರೆಝಾ ಕಾರುಗಳನ್ನು ಉತ್ತಮ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿತ್ತು. ಡಿಸೆಂಬರ್‌ನಲ್ಲಿ 17,336 ಯುನಿಟ್, ನವೆಂಬರ್‌ನಲ್ಲಿ 14,918 ಯುನಿಟ್, ಅಕ್ಟೋಬರ್‌ನಲ್ಲಿ 16,565 ಹಾಗೂ ಸೆಪ್ಟೆಂಬರ್‌ನಲ್ಲಿ 15,322 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ನೂತನ ಬ್ರೆಝಾ ಎಸ್‌ಯುವಿ ಕನಿಷ್ಠ ರೂ.8.69 ಲಕ್ಷ ಮತ್ತು ಗರಿಷ್ಠ ರೂ.14.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

ಈ ಕಾರು ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗವು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮ್ಯಾಗ್ಮಾ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ & ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Maruti Suzuki Brezza Suv February 2025 Sales Details

ನೂತನ ಮಾರುತಿ ಸುಜುಕಿ ಬ್ರೆಝಾ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್ 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 88 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತಿವಾಗಿದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಸರಿ ಸುಮಾರು 17.38 ರಿಂದ 25.51 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಜೊತೆಗೆ ದೂರದ ಊರುಗಳಿಗೆ ಹೋಗುವ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 328 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

Maruti Suzuki Brezza Suv February 2025 Sales Details

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 11, 2025, 14:48 [IST]
English summary
Maruti suzuki brezza suv february 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+