ಈ ಜನಪ್ರಿಯ ಎಸ್‌ಯುವಿಗಾಗಿ ಕ್ಯೂ ನಿಂತ ಗ್ರಾಹಕರು! 25 ಕಿ.ಮೀ ಮೈಲೇಜ್.. 5-ಸೀಟರ್.. 8 ಲಕ್ಷ!
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ನಂಬಿಕಾರ್ಹ ಎಸ್‌ಯುವಿಯಾಗಿದೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮವಾದ ಕಾರ್ಯಕ್ಷಮತೆಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಈ 2025ರ ಜುಲೈನಲ್ಲೂ ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಳಿಸಲಾಗಿದೆ. ಒಟ್ಟು 14,065 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 14,676 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಕೊಂಚ ಮಟ್ಟಿಗೆ ಶೇಕಡ -4% ಇಳಿಕೆಯಾಗಿದೆ.
ಈ ವರ್ಷದ ಮೊದಲ 6 ತಿಂಗಳಲ್ಲೂ 'ಮಾರುತಿ ಸುಜುಕಿ ಬ್ರೆಝಾ' ಕಾರು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಬರೋಬ್ಬರಿ 78,982 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ, ಪ್ರತಿ ತಿಂಗಳು 13,163 ಯುನಿಟ್‌ಗಳನ್ನು ಮಾರಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ವಿಶೇಷತೆಗಳೇನು:
ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ರೂ.8.69 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಖರೀದಿದಾರರು ಸಹ ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್ ಲೈಟ್‌ಗಳು ಹಾಗೂ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಎಕ್ಸಲರೆಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಬ್ರೆಝಾ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 101 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 139 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇನ್ನೊಂದು 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121.5 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೂ ದೊರೆಯುತ್ತದೆ. ಈ ಕಾರು 17.80 ರಿಂದ 25.51 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು.
ಹೊಸ ಬ್ರೆಝಾ 5-ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 3995 ಎಂಎಂ ಉದ್ದ, 1790 ಎಂಎಂ ಅಗಲ ಹಾಗೂ 1685 ಎಂಎಂ ಎತ್ತರವು ಇದೆ. 200 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2500 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಇದರ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಫಾಸ್ಟ್ ಚಾರ್ಜರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications