ಅಣ್ತಮ್ಮಾಸ್.. 25 ಕಿ.ಮೀ ಮೈಲೇಜ್, 8 ಲಕ್ಷದ 'ಮಾರುತಿ ಬ್ರೆಝಾ' ಕಾರು ಮಸಾಲಾ ದೋಸೆಯಂತೆ ಮಾರಾಟವಾಯ್ತು!

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಪ್ರಖ್ಯಾತ ಎಸ್‌ಯುವಿಯಾಗಿದೆ. ಈ ಕಾರನ್ನು ಕಂಪನಿಯು ಅರೆನಾ ಡೀಲರ್‌ಶಿಪ್ ಮೂಲಕ ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದು ಗ್ರಾಹಕರ ನೆಚ್ಚಿನ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದೇ ಮಾರ್ಚ್ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿಯಲ್ಲಿ ಈ ಮಾರುತಿ ಬ್ರೆಝಾ ಎಸ್‌ಯುವಿ ಆರನೇ ಸ್ಥಾನದಲ್ಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಸರಿ ಸುಮಾರು 16,546 ಯುನಿಟ್ 'ಬ್ರೆಝಾ' ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲಾಗಿದ್ದ 14,614 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಬೆಳವಣಿಗೆಯನ್ನು ಸಾಧಿಸಲಾಗಿದೆ. ಈ ವರ್ಷದ ಮೊದಲೆರೆಡು ತಿಂಗಳಲ್ಲೂ ಬ್ರೆಝಾ ಎಸ್‌ಯುವಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಫೆಬ್ರವರಿಯಲ್ಲಿ 15,392 ಯುನಿಟ್ ಮತ್ತು ಜನವರಿಯಲ್ಲಿ 14,747 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Maruti Suzuki Brezza Suv March 2025 Sales Details

ಅದೇ ರೀತಿಯಲ್ಲಿ 2024ರ ಕಡೆಯ ಮೂರು ತಿಂಗಳು ಸಹ 'ಮಾರುತಿ ಸುಜುಕಿ ಬ್ರೆಝಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಡಿಸೆಂಬರ್‌ನಲ್ಲಿ 17,336 ಯುನಿಟ್, ನವೆಂಬರ್‌ನಲ್ಲಿ 14,918 ಯುನಿಟ್ ಮತ್ತು ಅಕ್ಟೋಬರ್‌ ತಿಂಗಳಲ್ಲಿ 16,565 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮಾರಾಟ ಅಂಕಿ ಸಂಖ್ಯೆಯನ್ನು ಗಮನಿಸಿದಾಗ, ಮಾಸಿಕ ಸರಾಸರಿ 14,000 ಯುನಿಟ್ ಬ್ರೆಝಾ ಎಸ್‌ಯುವಿಗಳನ್ನು ಗ್ರಾಹಕರು ಕೊಂಡುಕೊಂಡಿದ್ದಾರೆ.

ದೇಶೀಯವಾಗಿ ಖರೀದಿಗೆ ಸಿಗುವ ಹೊಚ್ಚ ಹೊಸ ಮಾರುತಿ ಸುಜುಕಿ ಬ್ರೆಝಾ ಕಾರು, ರೂ.8.69 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಈ ಕಾರು ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Maruti Suzuki Brezza Suv March 2025 Sales Details

ಈ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 17.38 ರಿಂದ 25.51 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ನೂತನ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಮ್ಯಾಗ್ಮಾ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಈ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್ ಹಾಗೂ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ

Maruti Suzuki Brezza Suv March 2025 Sales Details

ಮಾರುತಿ ಸುಜುಕಿ ಬ್ರೆಝಾ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಟಾಟಾ ನೆಕ್ಸಾನ್ & ಹ್ಯುಂಡೈ ವೆನ್ಯೂ ಎಸ್‌ಯುವಿಗಳು ಪ್ರಬಲವಾದ ಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, April 13, 2025, 11:35 [IST]
English summary
Maruti suzuki brezza suv march 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+