Maruti Suzuki: ಹಬ್ಬಕ್ಕೆ ಸಿಹಿಸುದ್ದಿ.. ಮಾರುತಿ ಸುಜುಕಿಯಿಂದ ರಿಯಾಯಿತಿ ಘೋಷಣೆ, 3.50 ಲಕ್ಷಕ್ಕೆ ಹೊಸ ಕಾರು!
ಮಾರುತಿ ಸುಜುಕಿ ಇಂಡಿಯಾ (Maruti Suzuki India) ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ದೀಪಾವಳಿ ಪ್ರಯುಕ್ತ ಈ ಅಕ್ಟೋಬರ್ ತಿಂಗಳು ಉತ್ತಮ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಎಸ್-ಪ್ರೆಸ್ಸೊ, ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್ ಹಾಗೂ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಖರೀದಿ ಮೇಲೆ ರಿಯಾಯಿತಿ ಲಭ್ಯವಿದೆ. ಬನ್ನಿ, ಯಾವ ಕಾರಿಗೆ ಎಷ್ಟು ಆಫರ್ ಇದೆ. ಜೊತೆಗೆ ಎಕ್ಸ್-ಶೋರೂಂ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):
ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ರೂ.15,000 ವರೆಗೆ ಹಣಕಾಸಿನ ಪ್ರಯೋಜನವನ್ನು ಪಡೆದಿದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ಫೈರ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ & ಮೆಟಾಲಿಕ್ ಸಿಲ್ಕಿ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಎಸ್-ಪ್ರೆಸ್ಸೊ' ಕಾರು 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7 ಇಂಚು), ಯುಎಸ್‌ಬಿ ಕನೆಕ್ಟಿವಿಟಿ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 2 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):
ಈ ಹ್ಯಾಚ್‌ಬ್ಯಾಕ್‌ಗೆ ರೂ.15,000 ವರೆಗೆ ರಿಯಾಯಿತಿ ಸಿಗುತ್ತಿದೆ. ಕನಿಷ್ಠ ರೂ.3.70 ಲಕ್ಷ ಹಾಗೂ ಗರಿಷ್ಠ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಪ್ರೀಮಿಯಂ ಅರ್ಥ್ ಗೋಲ್ಡ್ & ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಆಲ್ಟೊ ಕೆ10' ಕಾರು 1-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7 ಇಂಚು), ಕೀಲೆಸ್ ಎಂಟ್ರಿ ಹಾಗೂ 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):
ಇದು ಕೂಡ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.15,000 ವರೆಗೆ ಹಣಕಾಸಿನ ಪ್ರಯೋಜನವನ್ನು ಹೊಂದಿದೆ. ರೂ.4.70 ಲಕ್ಷ ಮತ್ತು ಗರಿಷ್ಠ ರೂ.6.73 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸ್ಪೀಡಿ ಬ್ಲೂ, ಸಾಲಿಡ್ ಫೈರ್ ರೆಡ್ ಹಾಗೂ ಕೆಫೀನ್ ಬ್ರೌನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಸೆಲೆರಿಯೊ' ಕಾರು 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7 ಇಂಚು) ಐಡಲ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR)
ಈ ಹ್ಯಾಚ್‌ಬ್ಯಾಕ್ ರೂ.20,000 ರಿಯಾಯಿತಿ ಹೊಂದಿದ್ದು, ಕನಿಷ್ಠ ರೂ.4.99 ಲಕ್ಷ ಮತ್ತು ಗರಿಷ್ಠ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ & 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 23 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದು ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, ರೂ.30,000 ವರೆಗೆ ಹಣಕಾಸಿನ ಪ್ರಯೋಜನವನ್ನು ಪಡೆದಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. .2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 32.85 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ಇದು ಬೆಂಗಳೂರು ಹಾಗೂ ತುಮಕೂರಿನ ಅರೆನಾ ಡೀಲರ್‌ಶಿಪ್‌ನ್ನು ಸಂಪರ್ಕಿಸಿದಾಗ ಲಭ್ಯವಾದ ರಿಯಾಯಿತಿ ವಿವರಗಳಾಗಿವೆ. ಆದರೂ ನಗರದಿಂದ ನಗರಕ್ಕೆ ಈ ಹಣಕಾಸು ಪ್ರಯೋಜನಗಳಲ್ಲಿ ವ್ಯತ್ಯಾಸವಿರಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








