Maruti Suzuki: ಹೊಸ ಕಾರು ಖರೀದಿಸಬೇಕೇ.. ಮಾರುತಿ ಸುಜುಕಿಯಿಂದ ಬಿಗ್ ಶಾಕ್!

ಮಾರುತಿ ಸುಜುಕಿ (Maruti Suzuki) ನಂ.1 ಕಾರು ತಯಾರಕ ಕಂಪನಿಯಾಗಿದೆ. ಅರೆನಾ (Arena) ಹಾಗೂ ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯು ಎಲ್ಲ ಕಾರುಗಳ ದರವನ್ನು ಹೆಚ್ಚಿಸುವುದಾಗಿ ತಿಳಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ ಇಂಡಿಯಾ ಗುರುವಾರ ಎಲ್ಲ ವಿಧದ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ. ನೂತನ ದರಗಳು ಫೆಬ್ರವರಿ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. ಕಾರುಗಳನ್ನು ಅವಲಂಭಿಸಿ, ರೂ.1,500 ರಿಂದ ರೂ.32,500 ವರೆಗೆ ಬೆಲೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚದ ಹೆಚ್ಚಳವನ್ನು ಸರಿದೂಗಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕಂಪನಿಯು ತಿಳಿಸಿದೆ.

Maruti Suzuki Cars Price Hike Upto Rs 32 500 Alto Celerio Brezza Wagon R To Grand Vitara Details

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10): ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿನ ದರ ರೂ.19,500 ವರೆಗೆ ಅಧಿಕಗೊಂಡಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿರುವ ಹೊಸ ಆಲ್ಟೊ ಕೆ10 ಕಾರು, ರೂ.3.99 ಲಕ್ಷದಿಂದ ರೂ.5.96 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio): ಈ ಕಾರಿನ ಮೇಲೆ ದೊಡ್ಡಮಟ್ಟದಲ್ಲಿ ಬೆಲೆ ಏರಿಕೆಯಾಗಿದ್ದು, ಬರೋಬ್ಬರಿ ರೂ.32,500 ವರೆಗೆ ಹೆಚ್ಚಳಗೊಂಡಿದೆ. ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್, ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಕೊಡುತ್ತದೆ.

Maruti Suzuki Cars Price Hike Upto Rs 32 500 Alto Celerio Brezza Wagon R To Grand Vitara Details

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza): ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ಈ ಕಾರಿನ ದರ ರೂ.20,000 ವರೆಗೆ ಅಧಿಕವಾಗಿದೆ. ನೂತನ ಬ್ರೆಝಾ, ರೂ.8.34 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ 5-ಆಸನ ಆಯ್ಕೆಯನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga): ಇದೊಂದು ಎಂಪಿವಿಯಾಗಿದ್ದು, ಸರಿ ಸುಮಾರು ರೂ.15,000 ವರೆಗೆ ಬೆಲೆ ಏರಿಕೆಯನ್ನು ಪಡೆದಿದೆ. ಈ ಕಾರು, ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಇದು ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ.

Maruti Suzuki Cars Price Hike Upto Rs 32 500 Alto Celerio Brezza Wagon R To Grand Vitara Details

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara): ಈ ಎಸ್‌ಯುವಿಯ ದರ ರೂ.25,000 ವರೆಗೆ ಹೆಚ್ಚಳಗೊಂಡಿದೆ. ಪ್ರಸ್ತುತ ನೂತನ ಗ್ರ್ಯಾಂಡ್ ವಿಟಾರಾ ಕಾರು, ರೂ.10.99 ಲಕ್ಷದಿಂದ ರೂ.20.09 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಒಳಗೊಂಡಿದೆ.

ಇದು ಮಾತ್ರವಲ್ಲದೆ ಎಸ್-ಪ್ರೆಸ್ಸೊ ರೂ.5,000, ವ್ಯಾಗನ್ಆರ್ ರೂ.13,000, ಸ್ವಿಫ್ಟ್ 5,000, ಡಿಜೈರ್ ರೂ.10,500, ಇಕೋ ವ್ಯಾನ್ ರೂ.12,000, ಇಗ್ನಿಸ್ ರೂ.6,000, ಬಲೆನೊ ರೂ.9,000, ಸಿಯಾಜ್ ರೂ.1,500, ಎಕ್ಸ್‌ಎಲ್6 ರೂ.10,000, ಫ್ರಾಂಕ್ಸ್ ರೂ.5,500 ಮತ್ತು ಇನ್ವಿಕ್ಟೋ ರೂ.30,000 ಮತ್ತು ಜಿಮ್ನಿ ರೂ.1,500 ವರೆಗೆ ದರ ಹೆಚ್ಚಳವನ್ನು ಪಡೆದುಕೊಂಡಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, January 23, 2025, 22:52 [IST]
English summary
Maruti suzuki cars price hike upto rs 32500 alto celerio brezza wagon r to grand vitara details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+