34 ಕಿ.ಮೀ ಮೈಲೇಜ್.. 5.60 ಲಕ್ಷ, 6-ಏರ್‌ಬ್ಯಾಗ್‌.. ಈ ಮಾರುತಿ ಕಾರು ಗ್ರಾಹಕರಿಗೆ ಬೇಡವಾಯ್ತಾ.. ಕಾರಣವೇನು?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರನ್ನು ಅರೆನಾ ಡೀಲರ್‌ಶಿಪ್‌ ಮೂಲಕ ಮಾರಾಟಗೊಳಿಸಲಾಗುತ್ತದೆ. ಕೆಲವೇ ತಿಂಗಳ ಹಿಂದೆ, ಸೆಲೆರಿಯೊದ ಎಲ್ಲ ರೂಪಾಂತರಗಳಲ್ಲಿ (ವೇರಿಯೆಂಟ್) 6-ಏರ್‌ಬ್ಯಾಗ್‌ಗಳನ್ನು ಪರಿಚಯಿಸಲಾಗಿತ್ತು. ಅದರ ಹೊರತಾಗಿಯೂ ದಿನದಿಂದ ದಿನಕ್ಕೆ ಈ ಕಾರಿನ ಮಾರಾಟ ಸಂಖ್ಯೆ ಮಾತ್ರ ಕುಸಿತವಾಗುತ್ತಿದೆ. ಏಪ್ರಿಲ್ ತಿಂಗಳಲ್ಲೂ ಅದು ಮುಂದುವರಿದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ದೇಶೀಯ ಮಾರುಕಟ್ಟೆಯಲ್ಲಿ ಹೋದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿ ಕಂಪನಿಯು ಸರಿ ಸುಮಾರು 1474 ಯುನಿಟ್ 'ಸೆಲೆರಿಯೊ' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 3,220 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 54.22% ಇಳಿಮುಖವಾಗಿದೆ.

Maruti Suzuki Celerio April 2025 Sales Details

ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾರಾಟ ಸಂಖ್ಯೆ ಇಳಿಕೆಯಾಗಲು ನಾನಾ ಕಾರಣಗಳಿವೆ. ಈ ಕಾರು ಸಣ್ಣ ಗಾತ್ರದಿಂದ ಕೂಡಿದ್ದು, ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಇದೇ ಹ್ಯಾಚ್‌ಬ್ಯಾಕ್ ಬೆಲೆಗೆ ಬೇರೆ ಕಂಪನಿಗಳ ಸೆಡಾನ್, ಎಸ್‌ಯುವಿ ಹಾಗೂ ಎಂಪಿವಿಗಳು ಖರೀದಿಗೆ ಲಭ್ಯವಿವೆ. ಹೀಗಾಗಿ ಸೆಲೆರಿಯೊ ಮಾರಾಟ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಸೆಲೆರಿಯೊ ಹೇಗಿದೆ...

ಇದೊಂದು ಪುಟ್ಟ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಅತ್ಯಂತ ಕೈಗೆಟುಕುವ ದರದಲ್ಲಿ ಲಭ್ಯವಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಖರೀದಿ ಮಾಡಿ ಮನೆಗೆ ತರಬಹುದು. ಇದು ರೂಪಾಂತರಗಳನ್ನು ಅವಲಂಭಿಸಿ, ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ.

Maruti Suzuki Celerio April 2025 Sales Details

ನೂತನ ಸೆಲೆರಿಯೊ ಕಾರು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 313 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಆರ್ಕ್ಟಿಕ್ ವೈಟ್ ಕೆಫೀನ್ ಬ್ರೌನ್, ಬ್ಲೂ ಬ್ಲ್ಯಾಕ್, ಗ್ಲಿಸಿಂಗ್ ಗ್ರೇ & ಸಿಲ್ಕಿ ಸಿಲ್ವರ್‌ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಹ್ಯಾಚ್‌ಬ್ಯಾಕ್ ಬೆಲೆಗೆ ತಕ್ಕಂತೆ ಶಕ್ತಿಯುವ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.97 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Celerio April 2025 Sales Details

ಹೊಸ ಸೆಲೆರಿಯೊ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, May 23, 2025, 10:23 [IST]
English summary
Maruti suzuki celerio april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+