34 Km ಮೈಲೇಜ್.. 5.64 ಲಕ್ಷ, 6-ಏರ್‌ಬ್ಯಾಗ್‌ಗಳಿರುವ ಈ ಮಾರುತಿ ಕಾರು ಖರೀದಿಸಲು ಗ್ರಾಹಕರಿಗೆ ಮನಸಿಲ್ಲ!

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲೂ ಸಿಗುವುದರಿಂದ ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಆದರೆ, ನಾನಾ ಕಾರಣಗಳಿಗೆ ದಿನದಿಂದ ದಿನಕ್ಕೆ ಸೆಲೆರಿಯೊ ಮಾರಾಟ ಕುಸಿತವಾಗುತ್ತಲೇ ಇದೆ. ಅದಕ್ಕೆ ಈ ಮಾರ್ಚ್ ತಿಂಗಳು ಕೂಡ ಹೊರತಾಗಿಲ್ಲ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಬರೋಬ್ಬರಿ 2,268 ಯುನಿಟ್ ಸೆಲೆರಿಯೊ ಹ್ಯಾಚ್‌ಬ್ಯಾಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3,478 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -35% ಕುಸಿತವಾಗಿದೆ.

Maruti Suzuki Celerio Car March 2025 Sales Details

ಈ ವರ್ಷದ ಮೊದಲೆರಡು ತಿಂಗಳು ಸಹ 'ಮಾರುತಿ ಸುಜುಕಿ ಸೆಲೆರಿಯೊ' ಮಾರಾಟ ತೀವ್ರತರದಲ್ಲಿ ಇಳಿಮುಖವಾಗಿದೆ. ಫೆಬ್ರವರಿಯಲ್ಲಿ 4,226 ಯುನಿಟ್ ಮತ್ತು ಜನವರಿಯಲ್ಲಿ 1,954 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಹಾಗೆಯೇ ಹೋದ ವರ್ಷವೂ ಈ ಕಾರಿನ ಮಾರಾಟ ಪ್ರಮಾಣ ಉತ್ತಮವಾಗಿರಲಿಲ್ಲ. ಡಿಸೆಂಬರ್‌ನಲ್ಲಿ 748 ಯುನಿಟ್, ನವೆಂಬರ್‌ನಲ್ಲಿ 2,379 ಯುನಿಟ್ ಮತ್ತು ಅಕ್ಟೋಬರ್‌ನಲ್ಲಿ 3,044 ಯುನಿಟ್‌ಗಳನ್ನು ಮಾರಲಾಗಿತ್ತು.

ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾರಾಟ ಅಂಕಿಸಂಖ್ಯೆ ಕುಸಿತವಾಗಿರುವ ಬಗ್ಗೆ ಯಾವುದೇ ಸ್ಪಷ್ಟವಾದ ಕಾರಣವನ್ನು ಕಂಪನಿಯು ತಿಳಿಸಿಲ್ಲ. ಸದ್ಯ ಅಗ್ಗದ ದರಕ್ಕೆ ಎಸ್‌ಯುವಿಗಳೇ ಖರೀದಿಗೆ ದೊರೆಯುತ್ತಿವೆ. ಸೆಲೆರಿಯೊ ಪುಟ್ಟ ಕಾರಾಗಿರುವುದರಿಂದ ಗ್ರಾಹಕರು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki Celerio Car March 2025 Sales Details

ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.5.64 ಲಕ್ಷ ಹಾಗೂ ಗರಿಷ್ಠ ರೂ.7.37 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 313 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲ್ಯಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್ ಮತ್ತು ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಮಾರುತಿ ಸೆಲೆರಿಯೊ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೆನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಮ್ಯಾನುವಲ್ ಎಸಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್‌ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 17, 2025, 15:24 [IST]
English summary
Maruti suzuki celerio car march 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+