6 ಏರ್‌ಬ್ಯಾಗ್‌ನ ಮಾರುತಿ ಸೆಲೆರಿಯೊ ಕಾರು ಖರೀದಿಸಬೇಕೇ.. ಅತಿ ಕಡಿಮೆ ಆನ್-ರೋಡ್ ಬೆಲೆ.. EMI ಎಷ್ಟು?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು 6 ಏರ್‌ಬ್ಯಾಗ್‌ನೊಂದಿಗೆ ಮೇಲ್ದರ್ಜೆರಿಸಲಾಗಿದ್ದು, ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ಸಹ 'ಸೆಲೆರಿಯೊ' ಹ್ಯಾಚ್‌ಬ್ಯಾಕ್‌ನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ನಾವಿಲ್ಲಿ ಈ ಹೊಚ್ಚ ಹೊಸ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದೇವೆ.

ನೂತನ ಮಾರುತಿ ಸುಜುಕಿ ಸೆಲೆರಿಯೊ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ಮಾಡೆಲ್, ರೂ.6.85 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.1.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.35 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.11,000 ವರೆಗೆ ಇಎಂಐ ಪಾವತಿ ಮಾಡಬೇಕು.

Maruti Suzuki Celerio Get 6 Airbags New On-Road Price And Emi Details

ಈ ಕಾರಿನ ವಿಎಕ್ಸ್ಐ (ಪೆಟ್ರೋಲ್) ಮಾಡೆಲ್, ರೂ.7.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.1.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.5.70 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ಸರಿ ಸುಮಾರು ರೂ.12,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸೆಲೆರಿಯೊದ ವಿಎಕ್ಸ್ಐ (ಸಿಎನ್‌ಜಿ) ಮಾಡೆಲ್, ರೂ.8.40 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಈ ಕಾರನ್ನು ರೂ.1.5 ಲಕ್ಷ ಡೌನ್-ಪೇಮೆಂಟ್ ಕೊಂಡುಕೊಂಡರೆ, ರೂ.6.90 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ 14,000 ಇಎಂಐ ಪಾವತಿಸಬೇಕು.

Maruti Suzuki Celerio Get 6 Airbags New On-Road Price And Emi Details

ಹೊಸ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಪೆಟ್ರೋಲ್ ಮಾಡೆಲ್‌ಗಳು 24.97 ರಿಂದ 26.68 ಕೆಎಂಪಿಎಲ್‌ ಹಾಗೂ ಸಿಎನ್‌ಜಿ ಮಾಡೆಲ್‌ಗಳು 34.43 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 313 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್ ಕೆಫೀನ್ ಬ್ರೌನ್, ಬ್ಲೂ ಬ್ಲ್ಯಾಕ್, ಗ್ಲಿಸಿಂಗ್ ಗ್ರೇ ಹಾಗೂ ಸಿಲ್ಕಿ ಸಿಲ್ವರ್‌ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Celerio Get 6 Airbags New On-Road Price And Emi Details

ನೂತನ ಮಾರುತಿ ಸುಜುಕಿ ಸೆಲೆರಿಯೊ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್‌ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಕೂಡ 6 ಏರ್‌ಬ್ಯಾಗ್‌ನೊಂದಿಗೆ ಲಭ್ಯ: ಈ ಕಾರು ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಈ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ಕೆಲವೊಂದು ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Monday, March 31, 2025, 8:48 [IST]
English summary
Maruti suzuki celerio get 6 airbags new on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+