34 Km ಮೈಲೇಜ್.. 5.60 ಲಕ್ಷ, ಆದರೂ ಈ ಮಾರುತಿ ಕಾರನ್ನು ಗ್ರಾಹಕರು ಕೊಳ್ಳಲು ಮುಂದಾಗುತ್ತಿಲ್ಲ.. ಯಾಕೆ?
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ 'ಮೇ'ನಲ್ಲೂ ಮುಂದುವರಿದಿದ್ದು, ಕೇವಲ 1861 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ. 2024 ಇದೇ ಅವಧಿಯಲ್ಲಿ 3,314 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 43.84% ಇಳಿಕೆಯಾಗಿದೆ.
ಈ ವರ್ಷದ ಮೊದಲ 4 ತಿಂಗಳಲ್ಲೂ 'ಮಾರುತಿ ಸುಜುಕಿ ಸೆಲೆರಿಯೊ' ಕಾರಿನ ಮಾರಾಟವು ಹೇಳಿಕೊಳ್ಳುವ ರೀತಿಯಲ್ಲಿರಲಿಲ್ಲ. ಅಲ್ಲಿಯೂ ಹಲವು ಏರಿಳಿತಗಳನ್ನು ಕಾಣಲಾಗಿದೆ. ಏಪ್ರಿಲ್‌ನಲ್ಲಿ 1,474 ಯುನಿಟ್, ಮಾರ್ಚ್‌ನಲ್ಲಿ 2,268 ಯುನಿಟ್, ಫೆಬ್ರವರಿಯಲ್ಲಿ 4,226 ಯುನಿಟ್ ಹಾಗೂ ಜನವರಿಯಲ್ಲಿ 1,954 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಮಾರುತಿ ಸೆಲೆರಿಯೊ ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿನ ಬೆಲೆಗಿಂತ ಕೊಂಚ ಹೆಚ್ಚಿನ ಹಣವನ್ನು ಪಾವತಿ ಮಾಡಿದರೆ, ಅತ್ಯತ್ತಮವಾದ ಸೆಡಾನ್ ಹಾಗೂ ಎಸ್‌ಯುವಿಗಳನ್ನೇ ಮನೆ ತರಬಹುದು. ಜೊತೆಗೆ 'ಸೆಲೆರಿಯೊ'ದಲ್ಲಿ ಕೆಲವೊಂದು ವೈಶಿಷ್ಟ್ಯಗಳ ಕೊರತೆಯಿರುವುದರಿಂದ ಮಾರಾಟ ಪ್ರಮಾಣವು ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.5.64 ಹಾಗೂ ಗರಿಷ್ಠ ರೂ.7.37 ಲಕ್ಷ ಬೆಲೆಯನ್ನು (ಎಕ್ಸ್-ಶೋರೂಂ - ಬೆಂಗಳೂರು) ಹೊಂದಿದೆ. ವಿಎಕ್ಸ್ಐ, ಎಲ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದು ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪೀಡಿ ಬ್ಲೂ, ಗ್ಲಿಸ್ಟೆನಿಂಗ್ ಗ್ರೇ, ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್ ಮತ್ತು ಕೆಫೀನ್ ಬ್ರೌನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 313 - ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಹಾಗೆಯೇ ಸರಿ ಸುಮಾರು 32 - ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.
ನೂತನ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಹೆಚ್ಚಿನ ಹಾರ್ಸ್ ಪವರ್ & ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಸೆಲೆರಿಯೊ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. ಇದು ಎಂತಹವರನ್ನು ಕೂಡ ಪ್ರಯಾಣ ಮಾಡುವಂತೆ ಪ್ರೇರೇಪಿಸುತ್ತದೆ. ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು, ಸೆಂಟ್ರಲ್ ಆರ್ಮ್‌ರೆಸ್ಟ್, ರೇರ್ - ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ - ಹೋಲ್ಡ್ ಅಸಿಸ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications