34 Km ಮೈಲೇಜ್.. 5-ಸೀಟರ್, 4.70 ಲಕ್ಷ.. ಈ ಜನಪ್ರಿಯ ಮಾರುತಿ ಕಾರಿನ ಹೊಸ ಆನ್-ರೋಡ್ ದರವೆಷ್ಟು, EMI ಏನು?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಕಳೆದ ತಿಂಗಳಾಂತ್ಯದಲ್ಲಿ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಇದರ ಸಂಪೂರ್ಣ ಪ್ರಯೋಜನವು 'ಸೆಲೆರಿಯೊ'ಗೂ ದೊರೆಯುತ್ತಿದ್ದು, ರೂ.94,100 ವರೆಗೆ ಬೆಲೆ ಇಳಿಕೆಯಾಗಿದೆ. ಈ ಕಾರು ಕನಿಷ್ಠ ರೂ.4.70 ಲಕ್ಷ ಮತ್ತು ಗರಿಷ್ಠ ರೂ.6.73 ಎಕ್ಸ್-ಶೋರೂಂ ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಸೆಲೆರಿಯೊ' ಅತ್ಯುತ್ತಮ ಆಯ್ಕೆಯಾಗಿದೆ. ನಾವಿಲ್ಲಿ ಇದೇ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ನೂತನ 'ಸೆಲೆರಿಯೊ' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಕಾರಿನ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.5.55 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.3.55 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.7,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Celerio New On Road Price Mileage And Emi Details

ಇನ್ನೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.14 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.4.14 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.8,300 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.78 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.4.78 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.9,600 ವರೆಗೆ ಇಎಂಐ ಪಾವತಿಸಬೇಕು.

Maruti Suzuki Celerio New On Road Price Mileage And Emi Details

ಇದೇ ಕಾರಿನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.7.10 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.10 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.10,000 ವರೆಗೆ ಇಎಂಐ ಪಾವತಿ ಮಾಡಬೇಕು.

ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು:

ಈ ಕಾರು ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಸ್ಪೀಡಿ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಕೆಫೀನ್ ಬ್ರೌನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Celerio New On Road Price Mileage And Emi Details

ನೂತನ 'ಸೆಲೆರಿಯೊ' 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 313 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಐಡಲ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Wednesday, October 15, 2025, 8:31 [IST]
English summary
Maruti suzuki celerio new on road price mileage and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+