ಬೈಕ್‌ನಂತೆ 34 Km ಮೈಲೇಜ್.. ಬರೀ 4.70 ಲಕ್ಷ, ಈ ಜನಪ್ರಿಯ ಕಾರನ್ನು ಖರೀದಿಸಲು ಗ್ರಾಹಕರ ಹಿಂದೇಟು.. ಯಾಕೆ?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ. ನವೆಂಬರ್ ಅದು ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1,392 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,379 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -41.49% ಕುಸಿತವಾಗಿದೆ.

'ಮಾರುತಿ ಸೆಲೆರಿಯೊ' ಮಾರಾಟ ಸಂಖ್ಯೆ ಇಳಿಕೆಯಾಗಲು ಹಲವು ಕಾರಣಗಳಿವೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಎಲ್ಲ ಕಂಪನಿಯ ಕಾರುಗಳ ಬೆಲೆಯೂ ಇಳಿಕೆಯಾಗಿದೆ. ಸೆಲೆರಿಯೊಗಿಂತ ಕೊಂಚ ಹೆಚ್ಚಿನ ಹಣ ನೀಡಿದರೆ, ಎಸ್‌ಯುವಿಗಳೇ ಖರೀದಿ ಲಭ್ಯವಿವೆ. ಗ್ರಾಹಕರು ಅವುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇದು ಗಾತ್ರದಲ್ಲಿ ಸಣ್ಣ ಕಾರಾಗಿದೆ. ಹೀಗಾಗಿ, ಮಾರಾಟವು ಕುಸಿತವಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki Celerio November 2025 Sales Details

ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗಿನ 'ಮಾರುತಿ ಸುಜುಕಿ ಸೆಲೆರಿಯೊ' ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿದೆ. ಒಟ್ಟು 7,290 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಂದರೆ ಪ್ರತಿ ತಿಂಗಳು ಸರಾಸರಿ 1,458 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ನೂತನ 'ಸೆಲೆರಿಯೊ' ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

ಇದು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ಆಕರ್ಷಕವಾದ ರೂಪಾಂತರಗಳೊಂದಿಗೂ ಸಿಗುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

Maruti Suzuki Celerio November 2025 Sales Details

ಈ ಕಾರು ಪುಟ್ಟದಾಗಿದ್ದರೂ ಸಾಕಷ್ಟು ವಿಶಾಲವಾಗಿದೆ. 3,695 ಎಂಎಂ ಉದ್ದ, 1,655 ಎಂಎಂ ಅಗಲ ಮತ್ತು 1,555 ಎಂಎಂ ಎತ್ತರವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ಲಿಸ್ಟನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಸೆಲೆರಿಯೊ' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Maruti Suzuki Celerio November 2025 Sales Details

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆವನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 313 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು, ರೇರ್ ಎಸಿ ವೆಂಟ್‌ಗಳು, ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಸೆಂಟ್ರಲ್ ಲಾಕಿಂಗ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್‌ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, December 17, 2025, 8:31 [IST]
English summary
Maruti suzuki celerio november 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+