34 ಕಿ.ಮೀ ಮೈಲೇಜ್.. 5-ಸೀಟರ್, ಈ ಅಗ್ಗದ ಮಾರುತಿ ಕಾರನ್ನು ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಏನು, ಇಎಂಐ ಎಷ್ಟು?
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗದೆ. ತುಂಬಾ ಚೆನ್ನಾಗಿರುವ ವಿನ್ಯಾಸ & ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು ಕನಿಷ್ಠ ರೂ.5.60 ಲಕ್ಷ ಹಾಗೂ ಗರಿಷ್ಠ ರೂ.7.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ 'ಸೆಲೆರಿಯೊ' ಕಾರನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ತಿಳಿಸಿಕೊಟ್ಟಿದ್ದೇವೆ.
ಈ ಕಾರು ವಿವಿಧ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಪೆಟ್ರೋಲ್ ಚಾಲಿತ ಎಲ್ಎಕ್ಸ್ಐ ರೂಪಾಂತರ (ವೇರಿಯೆಂಟ್), ರೂ.6.82 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.3.82 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.7,700 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ಪೆಟ್ರೋಲ್ ಚಾಲಿತ ಝಡ್ಎಕ್ಸ್ಐ ರೂಪಾಂತರ, ರೂ.7.70 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.5.70 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.11,500 ವರೆಗೆ ಇಎಂಐ ಪಾವತಿಸಬೇಕು.
ಇನ್ನೊಂದು ಸಿಎನ್‌ಜಿ ಚಾಲಿತ ವಿಎಕ್ಸ್ಐ ರೂಪಾಂತರ, ರೂ.8.37 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.5.37 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.10,800 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು:
ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಕೆಫೀನ್ ಬ್ರೌನ್, ಸಾಲಿಡ್ ಫೈರ್ ರೆಡ್, ಬ್ಲೇಜಿಂಗ್ ರೆಡ್, ಪರ್ಲ್ ಬ್ಲೂಯಿಶ್ ಬ್ಲ್ಯಾಕ್, ಟಾರ್ಕ್ ಬ್ಲೂ, ಸ್ಪೀಡಿ ಬ್ಲೂ ಹಾಗೂ ಟ್ಯಾಂಗೋ ಆರೆಂಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಸೆಲೆರಿಯೊ 3,695 ಎಂಎಂ ಉದ್ದ, 1,655 ಅಗಲ ಮತ್ತು 1,555 ಎಂಎಂ ಎತ್ತರವು ಇದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 313 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸಾಮಾನ್ಯ ಬೈಕ್‌ನಂತೆ 24 ರಿಂದ 34 ಕಿ.ಮೀ ವರೆಗೂ ಮೈಲೇಜ್ ನೀಡುತ್ತದೆ. 32 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಹೊಸ ಸೆಲೆರಿಯೊ ಕಾರು 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಂಟ್ರಲ್ ಆರ್ಮ್‌ರೆಸ್ಟ್, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications