ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು: ಈ ಕಾರಿನ ಬೆಲೆ ಏರಿಕೆ ಶಾಕ್.. ಎಷ್ಟು?

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ನೆಕ್ಸಾ (NEXA) ಹಾಗೂ ಅರೆನಾ (Arena) ಡೀಲರ್‌ಶಿಪ್ ಮೂಲಕ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಈ ಕಾರಿನ ಮೇಲೆ ದೊಡ್ಡಮಟ್ಟದಲ್ಲಿ ಬೆಲೆ ಏರಿಕೆಯಾಗಿದ್ದು, ಬರೋಬ್ಬರಿ ರೂ.32,500 ವರೆಗೆ ಹೆಚ್ಚಳಗೊಂಡಿದೆ. ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್, ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ.

ಇತ್ತೀಚೆಗೆ ಮಾರುತಿ ಸುಜುಕಿ ಕಂಪನಿಯು ಡಿಸೆಂಬರ್ ತಿಂಗಳಿನ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಇನ್ನು ಕಳೆದ ತಿಂಗಳಿನಲ್ಲಿ ಮಾರುತಿ ಸುಜುಕಿ ಸೆಲರಿಯೊದ (Maruti Suzuki Celerio) 748 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ 247 ಯುನಿಟ್ ಗಳು ಮಾರಾಟವಾಗಿತ್ತು. ಇನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.203 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

Maruti Suzuki Celerio

ದೇಶೀಯ ಮಾರುಕಟ್ಟೆಯಲ್ಲಿ ನೂತನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಮಾರುತಿ ಸುಜುಕಿ ಸೆಲರಿಯೊ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ (Variant)ಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ. ಈ ಮಾರುತಿ ಸುಜುಕಿ ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಮತ್ತು ಸಿಟ್ರನ್ ಸಿ3 ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಈ ಸೆಲೆರಿಯೊ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು. ಮಾರುತಿ ಸುಜುಕಿ ಸೆಲರಿಯೊ ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್, ಸ್ಪೀಡಿ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಗಳಿವೆ. ಈ ಪುಟ್ಟ ಹ್ಯಾಚ್‌ಬ್ಯಾಕ್ ಆಗಿರುವುದರಿಂದ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಜೊತೆಗೆ 313 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಇನ್ನು ಮಾರುತಿ ಸುಜುಕಿ ಸೆಲೆರಿಯೊ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ.

Maruti Suzuki Celerio

ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಗರಿಷ್ಠ ಪವರ್ ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸಿಗುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. 57 ಪಿಎಸ್ ಪವರ್ ಮತ್ತು 82 ಎನ್ಎಂ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ದೊರೆಯುತ್ತದೆ.

ಈ ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕಿ.ಮೀ ಮೈಲೇಜ್ ಅನ್ನು ಹೊಂದಿವೆ. ಸಿಎನ್‌ಜಿ ಮಾದರಿ ಮಾತ್ರ 34.43 ಕಿ.ಮೀ/ಕೆಜಿವರೆಗೆ ಮೈಲೇಜ್ ನೀಡುತ್ತದೆ. ಸೆಲೆರಿಯೊ ಕಾರು 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Celerio

ಮಾರುತಿ ಸುಜುಕಿ ಸೆಲೆರಿಯೊ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಇನ್ನು ಮಧ್ಯಮ ವರ್ಗದ ಪುಟ್ಟ ಫ್ಯಾಮಿಲಿಗೆ ಈ ಕಾರು ಉತ್ತಮ ಆಯ್ಕೆಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, January 25, 2025, 11:00 [IST]
English summary
Maruti suzuki celerio price hiked in india details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+