ಅಗ್ಗದ ಮಾರುತಿ ಸುಜುಕಿ ಸೆಲೆರಿಯೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಹೊರ ಹೊಮ್ಮಿದೆ. ಈ ಕಾರಿನ ಬೆಲೆ ಫೆಬ್ರವರಿ 1ಕ್ಕೆ ಅನ್ವಯವಾಗುವಂತೆ ಸರಿ ಸುಮಾರು ರೂ.32,500 ವರೆಗೆ ಅಧಿಕಗೊಂಡಿದೆ. ದರ ಏರಿಕೆ ನಂತರ, ಈ ಹ್ಯಾಚ್‌ಬ್ಯಾಕ್ ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಸ ಕಾರೊಂದನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸೆಲೆರಿಯೊ ಹೆಚ್ಚು ಸೂಕ್ತವಾಗಲಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಸೆಲೆರಿಯೊ ಕಾರು ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಾಗುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.80 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಈ ಕಾರನ್ನು ಮನೆಗೆ ತಂದರೆ, ರೂ.4.80 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.10,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Celerio Price Revised New On Road Price Rate And Emi Details

ಮಾರುತಿ ಸೆಲೆರಿಯೊ ಹ್ಯಾಚ್‌ಬ್ಯಾಕ್‌ನ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.20 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.5.20 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಪಾವತಿಸಬೇಕು.

ಸೆಲೆರಿಯೊ ಕಾರಿನ ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.70 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.5.70 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Celerio Price Revised New On Road Price Rate And Emi Details

ಈ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್‌ನ ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.8.24 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ. 6.24 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.13000 ವರೆಗೆ ಇಎಂಐ ಪಾವತಿಸಬೇಕು.

ನೂತನ ಸೆಲೆರಿಯೊ ಹ್ಯಾಚ್‌ಬ್ಯಾಕ್‌ನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.8.27 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.6.27 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13000 ವರೆಗೆ ಇಎಂಐ ಕಟ್ಟಬೇಕು.

ಈ ಸೆಲೆರಿಯೊ ಕಾರು ಶಕ್ತಿಯುತವಾದ 2 ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದು 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿಯೂ ಸಿಗುತ್ತದೆ. 25.24 ರಿಂದ 26.68 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್‌ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಈ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Thursday, February 13, 2025, 16:58 [IST]
English summary
Maruti suzuki celerio price revised new on road price rate and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+