ಅಗ್ಗದ EMIಗೆ ಬೆಸ್ಟ್ ಕಾರಿದು, ತಿಂಗಳಿಗೆ ರೂ.6,000 ಕಟ್ಟಿದರೆ ಸಾಕು! 34 Km ಮೈಲೇಜ್.. ನಿಮ್ಮ ಬಜೆಟ್‌ಗೆ ಪರ್ಫೆಕ್ಟ್ ಚಾಯ್ಸ್!

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಗಿಯಾಗಿದೆ. ಈ ಕಾರು ನಗರಕ್ಕೆ ಸಂಚಾರಕ್ಕೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ 'ಸೆಲೆರಿಯೊ' ಅತ್ಯುತ್ತಮ ಆಯ್ಕೆಯಾಗಿದೆ. ನಾವಿಲ್ಲಿ ಇದೇ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಮತ್ತು ತಿಂಗಳ ಇಎಂಐ (Monthly Emi) ಆಯ್ಕೆಯ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ನೂತನ 'ಸೆಲೆರಿಯೊ' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.5.43 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.2.93 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.6,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Celerio Variants On Road Price And Emi Details

ಇನ್ನೊಂದು ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.56 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4.06 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.8,000 ವರೆಗೆ ಇಎಂಐ ಪಾವತಿಸಬೇಕು.

ಮತ್ತೊಂದು ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.7.19 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.4,69 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.9.500 ವರೆಗೆ ಇಎಂಐ ಕಟ್ಟಬೇಕು.

Maruti Suzuki Celerio Variants On Road Price And Emi Details

ಇದೇ ಕಾರಿನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.6.88 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.4.38 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.8,800 ವರೆಗೆ ಇಎಂಐ ಪಾವತಿ ಮಾಡಬೇಕು.

'ಮಾರುತಿ ಸೆಲೆರಿಯೊ' ವಿಶೇಷತೆಗಳೇನು:

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪೀಡಿ ಬ್ಲೂ, ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್, ಕೆಫೀನ್ ಬ್ರೌನ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Maruti Suzuki Celerio Variants On Road Price And Emi Details

ನೂತನ 'ಸೆಲೆರಿಯೊ' 1-ಲೀ. ಪೆಟ್ರೋಲ್ ಹಾಗೂ 1-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.97 ರಿಂದ 34.43 ಕಿ.ಮೀವರೆಗೆ ನೀಡುತ್ತದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 313 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Monday, November 24, 2025, 16:17 [IST]
English summary
Maruti suzuki celerio variants on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+