ಬಡವರ ಕಾರಿದು.. ಬೆಲೆಯೂ ಕಮ್ಮಿ, 34 ಕಿ.ಮೀ ಮೈಲೇಜ್.. 5-ಸೀಟರ್, ಹೊಸ ದರವೆಷ್ಟು?
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಶ್ರೀಸಾಮಾನ್ಯರ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಸೆ.22 ರಿಂದ ದೇಶಾದ್ಯಂತ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಲಾಭವು 'ಸೆಲೆರಿಯೊ' ಕಾರಿಗೂ ಲಭ್ಯವಿದೆ. ರೂ.94,100 ವರೆಗೆ ಬೆಲೆ ಇಳಿಕೆಯಾಗಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ರೂಪಾಂತರಗಳ (ವೇರಿಯೆಂಟ್) ಹೊಸ 'ಎಕ್ಸ್-ಶೋರೂಂ' ದರ ಎಷ್ಟಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ನೂತನ 'ಮಾರುತಿ ಸೆಲೆರಿಯೊ' ಹಲವು ವಿಧದಲ್ಲಿ ಗ್ರಾಹಕರ ಖರೀದಿ ಲಭ್ಯವಿದೆ. ಇದರ ಎಲ್ಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.4,69,900, ವಿಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,15,900 ಹಾಗೂ ವಿಎಕ್ಸ್ಐ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,60,900 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ.

ಅದೇ ರೀತಿಯಲ್ಲಿ ಜಡ್ಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,70,900, ವಿಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಸಿಎನ್‌ಜಿ) ರೂಪಾಂತರ ರೂ.5,97,900, ಝಡ್ಎಕ್ಸ್ಐ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ. 6,15,900, ಝಡ್ಎಕ್ಸ್ಐ ಪ್ಲಸ್ ಮ್ಯಾನುವಲ್ ಟ್ರಾಸ್ಮಿಷನ್ ರೂಪಾಂತರ ರೂ.6,27,900 ಮತ್ತು ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ ರೂ.6,72,900 ಎಕ್ಸ್-ಶೋರೂಂ ದರವನ್ನು ಪಡೆದಿದೆ.
ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು:
ಈ ಕಾರು ನೋಡುಗರ ಕಣ್ಣು ಕುಕ್ಕುವಂತಿದೆ. ಆದರೂ ಸರಳವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸ್ಪೀಡಿ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ & ಪರ್ಲ್ ಕೆಫೀನ್ ಬ್ರೌನ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.
ಇದು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 313 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ ಸೆಲೆರಿಯೊ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 32 ಲೀಟರ್ ಸಾಮರ್ಥ್ಯದ ಬೃಹದಾಕಾರದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ನೋಡುಗರ ಸೆಳೆಯುವಂತಿದೆ. ಡ್ಯಾಶ್‌ಬೋರ್ಡ್ ಕೂಡ ಉತ್ತಮವಾಗಿದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸರಿ ಸುಮಾರು 1,260 ಕೆಜಿ ತೂಕವಿದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು, ರೇರ್ ಎಸಿ ವೆಂಟ್‌ಗಳು, ಐಡಲ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಏರ್ ಕಂಡಿಷನರ್, ಸೆಂಟ್ರಲ್ ಲಾಕಿಂಗ್ ಹಾಗೂ ಮ್ಯಾನುವಲ್ ಎಸಿಯನ್ನು ಹೊಂದಿದೆ.
ಹೊಸ ಸೆಲೆರಿಯೊ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, 3-ಪಾಯಿಂಟ್ ಸೀಟ್‌ಬೆಲ್ಟ್ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.


Click it and Unblock the Notifications








