ಇದು ಡಿಜೈರ್ ಅಲ್ಲ.. 9 ಲಕ್ಷ.. 5-ಸೀಟರ್, 21 Km ಮೈಲೇಜ್.. ಈ ಮಾರುತಿ ಸೆಡಾನ್‌ಗೆ ಮನಸೋತ ಗ್ರಾಹಕರು!
ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz) ಪ್ರೀಮಿಯಂ ಸೆಡಾನ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಕಾರಿನ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿದೆ. ಒಂದು ತಿಂಗಳು ಸಿಯಾಜ್ ಮಾರಾಟ ಉತ್ತಮವಾಗಿದ್ದರೆ, ಮತ್ತೊಂದು ಕುಸಿತವಾಗುತ್ತದೆ. ಆದರೂ, ಇದೇ ಮಾರ್ಚ್ ತಿಂಗಳು ಈ ಕಾರನ್ನು ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮಾರ್ಚ್ - 2025) ಮಾರುತಿ ಸುಜುಕಿಯು ಬರೋಬ್ಬರಿ 676 ಯುನಿಟ್ 'ಸಿಯಾಜ್' ಸೆಡಾನ್‌ಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 590 ಯುನಿಟ್‌ಗಳನ್ನು ಮಾರಿತ್ತು. ಈ ಅಂಕಿ - ಸಂಖ್ಯೆಗೆ ಹೋಲಿಕೆ ಮಾಡಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 14.58% ಬೆಳವಣಿಗೆಯಾಗಿದೆ.

ಈ ವರ್ಷದ ಮೊದಲೆರೆಡು ತಿಂಗಳು ಸಹ ಮಾರುತಿ ಸುಜುಕಿ ಸಿಯಾಜ್ ಮಾರಾಟದಲ್ಲಿ ಏರಿಳಿತವನ್ನು ಕಾಣಲಾಗಿದೆ. ಫೆಬ್ರವರಿಯಲ್ಲಿ 1,097 ಯುನಿಟ್ ಮತ್ತು ಜನವರಿಯಲ್ಲಿ 768 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದೇ ರೀತಿಯಲ್ಲಿ 2024ರ ಕೊನೆ ಭಾಗದಲ್ಲೂ ಈ ಕಾರುಗಳನ್ನು ನಿಯಮಿತ ಸಂಖ್ಯೆಯಲ್ಲಿ ಮಾತ್ರ ಮಾರಾಟ ಮಾಡಲಾಗಿದೆ. ಡಿಸೆಂಬರ್‌ನಲ್ಲಿ 464 ಯುನಿಟ್, ನವೆಂಬರ್‌ನಲ್ಲಿ 597 ಯುನಿಟ್ ಹಾಗೂ ಅಕ್ಟೋಬರ್‌ನಲ್ಲಿ 659 ಯುನಿಟ್‌ಗಳನ್ನು ಮಾರಲಾಗಿತ್ತು.
ಹಲವಾರು ತಿಂಗಳಿನಿಂದ ಮಾರುತಿ ಸುಜುಕಿ ಸಿಯಾಜ್ ಕಾರಿನ ಮಾರಾಟ ಸಂಖ್ಯೆಯಲ್ಲಿ ಪ್ರಗತಿ ಹಾಗೂ ಕುಸಿತವನ್ನು ಕಾಣಲಾಗುತ್ತಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಎಸ್‌ಯುವಿಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಸೆಡಾನ್‌ಗಳ ಮಾರಾಟ ಕುಸಿತವಾಗುತ್ತಿದೆ. ಅದಕ್ಕೆ ಸಿಯಾಜ್ ಸಹ ಹೊರತಾಗಿಲ್ಲ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಆದರೂ ಸೀಮಿತ ಸಂಖ್ಯೆಯಲ್ಲಿ ಗ್ರಾಹಕರು ಸಿಯಾಜ್ ಸೆಡಾನ್‌ಗಳನ್ನು ಕೊಳ್ಳುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಕಾರಿನ ಮಾರಾಟ ಸಂಖ್ಯೆ ಮತ್ತಷ್ಟು ಹೆಚ್ಚಾಗಿವ ನಿರೀಕ್ಷೆಯಿದೆ.

ಮಾರುತಿ ಸುಜುಕಿ ಸಿಯಾಜ್ ಸೆಡಾನ್ ವಿಶೇಷತೆಗಳೇನು: ಈ ಸೆಡಾನ್‌ನ್ನು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತಿದೆ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.9.41 ಲಕ್ಷ ಮತ್ತು ಗರಿಷ್ಠ ರೂ.12.31 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 510 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 138 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.04 ರಿಂದ 20.65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಮಾರುತಿ ಸುಜುಕಿ ಸಿಯಾಜ್ ಸೆಡಾನ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್ ಕ್ರೂಸ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿಯನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಸೀಟ್‌ಬೆಲ್ಟ್ ರಿಮೆಂಡರ್ ಆಯ್ಕೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications