6 ಏರ್‌ಬ್ಯಾಗ್‌ನೊಂದಿಗೆ ಭಾರೀ ಮೈಲೇಜ್ ನೀಡಬಲ್ಲ ಕಾರನ್ನು ತೆಗೆದುಕೊಳ್ಳಬೇಕೇ.. ಈ ಮಾಡೆಲ್‌ಗಳು ಫುಲ್ ಓಕೆ!
ಹೊಸ ಕಾರು ಖರೀದಿ ಮಾಡುವವರಿಗೆ ಸುರಕ್ಷತೆಯೊಂದಿಗೆ ಗರಿಷ್ಠ ಮೈಲೇಜ್ ಎಂಬುದು ಬಹುಮುಖ್ಯವಾದ ಆದ್ಯತೆಯಾಗಿರುತ್ತದೆ. ಆದರೆ, ಯಾವ ಕಾರನ್ನು ತೆಗೆದುಕೊಂಡರೆ ಇವೆರೆಡು ಅಂಶಗಳು ಒಟ್ಟೊಟ್ಟಿಗೆ ಸಿಗುತ್ತದೆ ಎಂಬುದು ತಿಳಿದಿರುವುದಿಲ್ಲ. ಅಂತಹ ಗ್ರಾಹಕರಿಗೆ 6 ಏರ್‌ಬ್ಯಾಗ್‌ನೊಂದಿಗೆ ಗರಿಷ್ಠ ಮೈಲೇಜ್ ನೀಡಬಲ್ಲ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಹಾಗೂ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಕಾರುಗಳು ಹೆಚ್ಚು ಸೂಕ್ತವಾಗಬಲ್ಲವು. ಬನ್ನಿ.. ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಡಿಜೈರ್ ಹಾಗೂ ಸೆಲೆರಿಯೊ ಕಾರುಗಳೆರಡು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತವೆ. ಡಿಜೈರ್ ಸೆಡಾನ್ ಆಗಿದ್ದು, ರೂ.6.84 ರಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಆಗಿರುವುದರಿಂದ ರೂ.5.64 ರಿಂದ ರೂ.7.37 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ನೂತನ ಮಾರುತಿ ಸುಜುಕಿ ಡಿಜೈರ್ ಸೆಡಾನ್ 1.2-ಲೀ. ಝಡ್ ಸೀರೀಸ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು ಹೆಚ್ಚಿನ ಇಂಧನ ದಕ್ಷತೆಯನ್ನು ಒಳಗೊಂಡಿದೆ. ಈ ಹಿನ್ನೆಲೆ, ನಿರ್ವಹಣಾ ವೆಚ್ಚವು ಅಗ್ಗವಾಗಿದೆ. ಪೆಟ್ರೋಲ್ ಚಾಲಿತ ಮಾಡೆಲ್ 24.79 ರಿಂದ 25.71 ಕೆಎಂಪಿಎಲ್ ಹಾಗೂ ಸಿಎನ್‌ಜಿ ಚಾಲಿತ ಮಾಡೆಲ್ 33.73 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.
ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಇದರ ಪೆಟ್ರೋಲ್ ಚಾಲಿತ ಮಾಡೆಲ್ 25 ರಿಂದ 26 ಕೆಎಂಪಿಎಲ್ ಮತ್ತು ಸಿಎನ್‌ಜಿ ಚಾಲಿತ ಮಾಡೆಲ್ 34.43 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಮಾರುತಿ ಡಿಜೈರ್ ಕಾರಿನಲ್ಲಿ 5 ಆಸನ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸೆಲೆರಿಯೊದಲ್ಲೂ 5 ಆಸನಗಳಿದ್ದು, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.
ನೂತನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಕೂಡ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications