ಎಲ್ಲರ ಲೆಕ್ಕಾಚಾರ ಉಲ್ಟಾ.. ಬೈಕ್‌ನಂತೆ 33 ಕಿ.ಮೀ ಮೈಲೇಜ್, 6 ಲಕ್ಷದ ಈ ಮಾರುತಿ ಸೆಡಾನ್‌ಗೆ ಫುಲ್ ಡಿಮ್ಯಾಂಡ್.. ನಂ.1 ಆಯ್ತು!
ದೇಶೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಎಸ್‌ಯುವಿಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದೆ. ಆದರೆ ಎಸ್‌ಯುವಿಗಳ ವಿರುದ್ಧ ಈ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಬಂಡೆಯಾಗಿ ನಿಂತಿದ್ದು, ಎಲ್ಲರ ಲೆಕ್ಕಾಚಾರ ಮಾಡುವುದರೊಂದಿಗೆ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಮೂಲ ಪ್ರಕಾರ, ಈ 2025ರ ಜುಲೈನಲ್ಲಿ ಇದೇ 'ಡಿಜೈರ್' ಅಗ್ರಸ್ಥಾನದಲ್ಲಿದೆ. ಒಟ್ಟು 20,895 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, ಜೂನ್‌ನಲ್ಲಿ 15,484 ಯುನಿಟ್‌ಗಳನ್ನು ಮಾರಲಾಗಿತ್ತು.
'ಮಾರುತಿ ಸುಜುಕಿ ಡಿಜೈರ್' ಕೈಗೆಟುಕುವ ಬೆಲೆ, ಉತ್ತಮ ಇಂಧನ ದಕ್ಷತೆ, ವಿಶ್ವಾಸಾರ್ಹತೆ ಹಾಗೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇದೇ ಈ ಕಾರಿನ ಯಶಸ್ಸಿನ ಹಿಂದೆ ಅಡಗಿರುವ ಗುಟ್ಟು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು:
ಇದು ಕಾಂಪ್ಯಾಕ್ಟ್ ಸೆಡಾನ್ ಆಗಿದೆ. ಅಗ್ಗದ ದರದಲ್ಲೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ಝಡ್ಎಕ್ಸ್ಐ ಒಳಗೊಂಡಂತೆ ಹಲವು ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಲ್ಲುರಿಂಗ್ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ಗ್ಯಾಲಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ ಡಿಜೈರ್ ಸೆಡಾನ್ 3,995 ಎಂಎಂ ಉದ್ದ, 1,735 ಎಂಎಂ ಅಗಲ, 1,515 ಎಂಎಂ ಎತ್ತರವು ಇದೆ. ಜೊತೆಗೆ 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ.
ನೂತನ ಡಿಜೈರ್ ಶಕ್ತಿಯುತವಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ಪೆಟೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಹಾಗೆಯೇ 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್, ಆಟೋ ಎಸಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications