Maruti Suzuki: ಮಾರುತಿ ಸುಜುಕಿಯಿಂದ ಬೆಲೆ ಏರಿಕೆ ಶಾಕ್.. ಡಿಜೈರ್, ಬ್ರೆಝಾ & ಇಕೋ ಕಾರುಗಳ ನೂತನ ದರವೆಷ್ಟು?

ಮಾರುತಿ ಸುಜುಕಿ ಇಂಡಿಯಾ (Maruti Suzuki India), ಪ್ರಮುಖ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಫೆಬ್ರವರಿ 1ಕ್ಕೆ ಜಾರಿಗೆ ಬರುವಂತೆ ಎಲ್ಲ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ನೂತನ ಕಾರುಗಳ ದರ ರೂ.1,500 ರಿಂದ ರೂ.32,500 ವರೆಗೆ ಅಧಿಕಗೊಂಡಿದೆ. ನಾವಿಲ್ಲಿ ಬೆಲೆ ಏರಿಕೆ ಪಡೆದುಕೊಂಡ ಡಿಜೈರ್ (Dzire), ಬ್ರೆಝಾ (Brezza) ಹಾಗೂ ಇಕೋ (Eeco) ಕಾರುಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಕುರಿತಂತೆ ಮಾತನಾಡೋಣ. ಇದೊಂದು ಜನಪ್ರಿಯ ಸೆಡಾನ್ ಆಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.5,000 ರಿಂದ ರೂ.10,000 ದರ ಹೆಚ್ಚಳವನ್ನು ಪಡೆದುಕೊಂಡಿದೆ. ಬೆಲೆ ಏರಿಕೆ ನಂತರ, ಈ ಕಾರು ರೂ.6.84 ಲಕ್ಷದಿಂದ ರೂ.10.19 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ.

Maruti Suzuki Dzire Brezza And Eeco Cars Price Hike Details

ಈ ಡಿಜೈರ್ ಕಾರು 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಬಗ್ಗೆ ಮಾತನಾಡುವುದಾದರೆ, ಇದು ಪ್ರಖ್ಯಾತ ಎಸ್‌ಯುವಿಯಾಗಿ ಹೆಸರುವಾಗಿದೆ. ಈ ಕಾರಿನ ಆಯ್ದ ರೂಪಾಂತರಗಳು ರೂ.20,000 ಬೆಲೆ ಏರಿಕೆಯನ್ನು ಪಡೆದುಕೊಂಡಿವೆ. ನೂತನ ಬ್ರೆಝಾ ಎಸ್‌ಯುವಿ, ರೂ.8.54 ಲಕ್ಷದಿಂದ ರೂ.14.14 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ.

Maruti Suzuki Dzire Brezza And Eeco Cars Price Hike Details

ಈ ಬ್ರೆಝಾ ಕಾರು,1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಸಿಂಗಲ್-ಪೇನ್ ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco) ಕುರಿತಂತೆ ಹೇಳುವುದಾದರೆ, ಇದೊಂದು ವ್ಯಾನ್ ಆಗಿದೆ. ಇದರ ಎಲ್ಲ ರೂಪಾಂತರಗಳ ಬೆಲೆ ರೂ.12,000 ಏರಿಕೆಯಾಗಿದೆ. ಈ ಕಾರು, ರೂ.5.44 ಲಕ್ಷದಿಂದ ರೂ.6.70 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ನೂತನ ಇಕೋ ವ್ಯಾನ್ 5 ಹಾಗೂ 7 ಆಸನಗಳನ್ನು ಒಳಗೊಂಡಿದೆ.

Maruti Suzuki Dzire Brezza And Eeco Cars Price Hike Details

ಈ ವ್ಯಾನ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುಯಲ್ ಎಸಿ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಯಾಗಿ ಡುಯಲ್ ಏರ್‌ಬ್ಯಾಗ್‌ಗಳು ಮತ್ತು ಫ್ರಂಟ್ ಸೀಟ್‌ಬೆಲ್ಟ್ ರಿಮೆಂಡರ್ ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, February 7, 2025, 22:26 [IST]
English summary
Maruti suzuki dzire brezza and eeco cars price hike details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+