33 ಕಿ.ಮೀ ಮೈಲೇಜ್.. 6 ಲಕ್ಷ, ಈ ಜನಪ್ರಿಯ Maruti Suzuki ಕಾರಿಗೆ ಮುಗಿಬಿದ್ದ ಗ್ರಾಹಕರು.. ಫುಲ್ ಡಿಮ್ಯಾಂಡ್!
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ವಿಶ್ವಾಸಾರ್ಹ ಸೆಡಾನ್ ಆಗಿದೆ. ಇದು ಆಕರ್ಷಕವಾದ ವಿನ್ಯಾಸ, ಉತ್ತಮ ಕಾರ್ಯಕ್ಷಮತೆ ಹಾಗೂ ಕೈಗೆಟುಕುವ ಬೆಲೆಯಿಂದಲೇ ಮನೆ ಮಾತಾಗಿದೆ. ಇದರಿಂದಾಗಿ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಈ ಜೂನ್ ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಮಾರಾಟ ವರದಿ ಪ್ರಕಟಗೊಂಡಿದೆ. ಅದರಲ್ಲಿ ಇದೇ 'ಡಿಜೈರ್' 2ನೇ ಸ್ಥಾನದಲಿದ್ದು, ಬರೋಬ್ಬರಿ 15,484 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಆದರೂ, 15,786 ಯುನಿಟ್ ಮಾರಾಟದೊಂದಿಗೆ ಹ್ಯುಂಡೈ ಕ್ರೆಟಾ ಎಸ್‌ಯುವಿ ಮೊದಲ ಸ್ಥಾನದಲ್ಲಿದೆ.
ಈ ವರ್ಷದ ಮೊದಲ 5 ತಿಂಗಳಲ್ಲೂ 'ಮಾರುತಿ ಡಿಜೈರ್' ಸೆಡಾನ್ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದ್ದು, ಗ್ರಾಹಕರು ಕೂಡ ನಾಮುಂದು-ತಾಮುಂದು ಎಂಬಂತೆ ಮುಗಿಬಿದ್ದು ಖರೀದಿ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಮೇನಲ್ಲಿ18,084, ಏಪ್ರಿಲ್‌ನಲ್ಲಿ 16,996, ಮಾರ್ಚ್‌ನಲ್ಲಿ 15,460, ಫೆಬ್ರವರಿಯಲ್ಲಿ 14,694 ಹಾಗೂ ಜನವರಿಯಲ್ಲಿ 15,383 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕಾಹಾಕಿದಾಗ ಪ್ರತಿ ತಿಂಗಳು ಸರಾಸರಿ 15,000 ಯುನಿಟ್ ಡಿಜೈರ್ ಕಾರುಗಳು ಮಾರಾಟವಾಗಿವೆ.

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು:
ಇದೊಂದು ಕಾಂಪ್ಯಾಕ್ಟ್ ಸೆಡಾನ್ ಆಗಿದ್ದು, ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ಈ ಕಾರು ಕನಿಷ್ಠ ರೂ.6.84 ಲಕ್ಷ ಹಾಗೂ ಗರಿಷ್ಠ ರೂ.10.19 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಡಿಜೈರ್ ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್ ಮತ್ತು ಅಲ್ಲುರಿಂಗ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಕಾರು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ಝಡ್ ಸೀರೀಸ್ ಪೆಟೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಒಂದಷ್ಟು ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. ಹೆಚ್ಚಿನ ದೂರ ಕ್ರಮಿಸಲು ಸಾಧ್ಯವಾಗುವಂತೆ 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ. ಜೊತೆಗೆ ಈ ಕಾರು 2,450 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ ಮಾರುತಿ ಡಿಜೈರ್ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಕರ್ಷಕವಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ - ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್ ಹಾಗೂ ಆಟೋ ಎಸಿಯನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಗ್ಲೋಬಲ್ ಎನ್‌ಸಿಎಪಿ & ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications