Maruti: 7 ಲಕ್ಷದೊಳಗೆ ಸಿಗುವ ಸುರಕ್ಷಿತ ಕಾರು: 33.73 ಕಿ.ಮೀ ಮೈಲೇಜ್... ಸನ್‌ರೂಫ್ ಕೂಡ ಇದೆ!
ಇತ್ತೀಚೆಗೆ ಭಾರತದಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದ್ದು, ದೇಶೀಯ ಬ್ರಾಂಡ್‌ಗಳಾದ ಟಾಟಾ ಹಾಗೂ ಮಹೀಂದ್ರಾ ಸುರಕ್ಷಿತ ಕಾರುಗಳನ್ನು ನೀಡುವಲ್ಲಿ ಯಶಸ್ವಿಯಾಗಿವೆ. ಈಗ ಇದೇ ದಾರಿಯಲ್ಲಿ ಮಾರುತಿ ಸುಜುಕಿ ಕೂಡ ನಡೆಯುತ್ತಿದೆ. ಇತ್ತೀಚೆಗೆ ಬಿಡುಗಡೆ ಮಾಡಿರುವ ಮಾರುತಿ ಡಿಜೈರ್ (Maruti Suzuki Dzire) ಕಂಪನಿಯ ಮೊದಲ ಪರಿಪೂರ್ಣ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಕಾರಾಗಿ ಸದ್ದು ಮಾಡಿದೆ. ಅಗ್ಗದ ಬೆಲೆ, ಆಕರ್ಷಕ ಫೀಚರ್ಸ್, ಸುರಕ್ಷತೆಗಾಗಿ ಹಲವು ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ಒಟ್ಟಾರೆ ಕಡಿಮೆ ಬೆಲೆಯಲ್ಲಿ ಬೆಸ್ಟ್ ಆಯ್ಕೆಯಾಗಿದೆ ಎಂದು ಹೇಳಬಹುದು.
ಪರಿಪೂರ್ಣ ಫೈವ್ ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಮಾರುತಿ ಸುಜುಕಿಯ ಮೊದಲ ಮತ್ತು ಏಕೈಕ ಕಾರು ಡಿಜೈರ್ ಆಗಿದೆ. ಮಾರುತಿ ಸುಜುಕಿ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.6.79 ಲಕ್ಷಗಳಿಂದ ಆರಂಭವಾಗುತ್ತದೆ. ಹಾಗೆಯೇ ಟಾಪ್ ವೇರಿಯೆಂಟ್ ಬೆಲೆಯು ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಮಾರುತಿ ಸುಜುಕಿ ಡಿಜೈರ್ ವಯಸ್ಕ ಪ್ರಯಾಣಿಕರಿಗೆ ಐದು ಸ್ಟಾರ್ ಮತ್ತು ಮಕ್ಕಳಿಗೆ ನಾಲ್ಕು ಸ್ಟಾರ್ ಗಳಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ವಯಸ್ಕ ಪ್ರಯಾಣಿಕರ ರಕ್ಷಣಾ ಪರೀಕ್ಷೆಯಲ್ಲಿ ಡಿಜೈರ್ 34 ಅಂಕಗಳಲ್ಲಿ 31.24 ಅಂಕಗಳು ಮತ್ತು ಮಕ್ಕಳ ಪ್ರಯಾಣಿಕರ ರಕ್ಷಣಾ ಪರೀಕ್ಷೆಯಲ್ಲಿ 42 ಅಂಕಗಳಲ್ಲಿ 39.20 ಅಂಕಗಳನ್ನು ಪಡೆದುಕೊಂಡಿದೆ.
ಈ ಡಿಜೈರ್ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳು, ESP, ಹಿಲ್ ಹೋಲ್ಡ್ ಅಸಿಸ್ಟ್, EBD ಜೊತೆಗೆ ABS, ಬ್ರೇಕ್ ಅಸಿಸ್ಟ್, ಎಲ್ಲಾ ಸೀಟ್‌ಗಳಿಗೆ ಮೂರು-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು ISOFIX ಮೌಂಟ್‌ಗಳಂತಹ ಸುರಕ್ಷತಾ ಫೀಚರ್ ಗಳಿವೆ. ಒಟ್ಟಾರೆ ಈ ಎಲ್ಲಾ ಸುರಕ್ಷತಾ ಫೀಚರ್ಸ್ ಹಾಗೂ ನಿರ್ಮಾಣ ಗುಣಮಟ್ಟದೊಂದಿಗೆ ಡಿಜೈರ್ ಪರಿಪೂರ್ಣ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ.

ಹೊಸ ಡಿಜೈರ್ ಕಾರಿನಲ್ಲಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿ, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 3-ಸ್ಪೋಕ್ ಸ್ಟೀರಿಂಗ್ ವೀಲ್‌ನ್ನು ಒಳಗೊಂಡಿದೆ. ಈ ಕಾರಿನಲ್ಲಿ ಸನ್‌ರೂಫ್ (ಸಿಂಗಲ್ ಪ್ಯಾನೆಲ್) ಕೂಡ ನೀಡಲಾಗಿದೆ.
ಹೊಸ ಡಿಜೈರ್ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ನೊಂದಿಗೆ ಬರುತ್ತದೆ, 82 ಪಿಎಸ್ ಪವರ್ ಮತ್ತು 112 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಟ್ರಾನ್ಸ್ ಮಿಷನ್ ಅಥವಾ 5-ಸ್ಪೀಡ್ ಎಎಂಟಿಯನ್ನು ಅಳವಡಿಸಲಾಗಿದೆ. ಐಚ್ಛಿಕ ಸಿಎನ್‌ಜಿ ಪವರ್ ಕೂಡ ಲಭ್ಯವಿದ್ದು, ಇದು 70 ಪಿಎಸ್ ಪವರ್ ಮತ್ತು 102 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ನೊಂದಿಗೆ ಮಾತ್ರ ಲಭ್ಯವಿದೆ.

ಕಂಪನಿಯ ಪ್ರಕಾರ ಡಿಜೈರ್ ಪೆಟ್ರೋಲ್ ಎಂಟಿನಲ್ಲಿ ಪ್ರತಿ ಲೀಟರ್‌ಗೆ 24.79 ಕಿ.ಮೀ., ಪೆಟ್ರೋಲ್ ಎಎಂಟಿನಲ್ಲಿ 25.71 ಕಿ.ಮೀ. ಹಾಗೂ ಸಿಎನ್‌ಜಿನಲ್ಲಿ ಪ್ರತಿ ಕೆ.ಜಿಗೆ ಬರೋಬ್ಬರಿ 33.73 ಕಿ.ಮೀ ಮೈಲೇಜ್ ನೀಡುತ್ತದೆ. 2024ರ ಮಾರುತಿ ಡಿಜೈರ್ ಕಾರು ಹೊಸ ತಲೆಮಾರಿನ ಹೋಂಡಾ ಅಮೇಜ್, ಹ್ಯುಂಡೈ ಔರಾ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications